ಉಡುಪಿ : ಹೆಬ್ರಿಯ ಸೀತಾನದಿ ಕೂಡ್ಲು ಫಾಲ್ಸ್ನಲ್ಲಿ ಬಂಡೆಕಲ್ಲಿನಿಂದ ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ. ಮೃತರನ್ನು ಆರ್ಡಿ ಕೊಂಜಾಡಿ ಗ್ರಾಮದ ಮನ್ವಿತ್ (25) ಎಂದು ಗುರುತಿಸಲಾಗಿದೆ.

ಡಿಸೆಂಬರ್ 14ರಂದು ಸ್ನೇಹಿತರೊಂದಿಗೆ ಕೂಡ್ಲು ಫಾಲ್ಸ್ಗೆ ತೆರಳಿದ್ದ ವೇಳೆ ಎತ್ತರದ ಬಂಡೆಯ ಮೇಲೆ ಕುಳಿತಿದ್ದ ಮನ್ವಿತ್ ಆಕಸ್ಮಿಕವಾಗಿ ಜಾರಿ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು.

ಅವರನ್ನು ತಕ್ಷಣ ಕೆಎಂಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



