ಕೊಲ್ಲೂರು : ಪ್ರಸ್ತುತ ಕಾಲ ಘಟ್ಟದಲ್ಲಿ ಯುವ ಜನರಲ್ಲಿ ಸಂಸ್ಕ್ರತಿಯ ಆಸಕ್ತಿ ಕಡಿಮೆ ಆಗ್ತಾ ಇದೆ ಯುವಜನರು ಸಂಸ್ಕಾರ ಮರೆತು ಕೆಲಸ ನಿರ್ವಹಿಸುತ್ತಾ ಇದ್ದಾರೆ ಇಂಥ ಶಿಬಿರದಿಂದ ವಿದ್ಯಾರ್ಥಿಗಳಿಗೆ ಒಳ್ಳೆ ಸಂಸ್ಕಾರ ನಡವಳಿಕೆ ಮತ್ತು ಸೇವಾ ಮನೋಭಾವ ಬೆಳೆಸುತ್ತದೆ ಶಿಬಿರದ ಮಹತ್ವ ಅರಿತು ವಿದ್ಯಾರ್ಥಿಗಳು ಕೆಲಸ ಮಾಡಬೇಕು ಎಂದು ಹಿರಿಯ ಮಾರಣಕಟ್ಟೆ ಯಕ್ಷಗಾನ ಮೇಳದ ಕಲಾವಿದ ಚಂದ್ರ ಗೌಡ ಹೇಳಿದರು.
ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಆರೆಶಿರೂರುಯಲ್ಲಿ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿ ಕೊಲ್ಲೂರು ಇದರ ವಾರ್ಷಿಕ ವಿಶೇಷ ಶಿಬಿರದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಮುಖ್ಯ ಅತಿಥಿಗಳಾಗಿ ಗೊಳಿಹೊಳೆ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ್ ಹೆಗ್ಡೆ, ಗೊಳಿಹೊಳೆ ಗ್ರಾಮ ಪಂಚಾಯತ್ ಸದಸ್ಯ ಶೇಖರ್ ಮರಾಠಿ , ಜನ್ಮನೆ ನಿವೃತ್ತ ಮುಖ್ಯೋಪಾಧ್ಯಯರಾದ ಗೋಪಾಲ್ ಶೆಟ್ಟಿ , ಪ್ರಗತಿಪರ ಕೃಷಿಕರಾದ ರಾಮ್ ಪೂಜಾರಿ ಕಪ್ಪಾಡಿ, ಸಾಂಸ್ಕೃತಿಕ ಕಾರ್ಯಕ್ರಮದ ನಾಯಕ ರಾಕೇಶ್ ಆರ್ ಹಾಗೂ ನಾಯಕಿ ರೇಖಾ ಉಪಸ್ಥಿತರಿದ್ದರು.
ಕಾಲೇಜಿನ ಉಪನ್ಯಾಸಕ ಶಿಬಿರದ ಯೋಜನಾಧಿಕಾರಿ ನಾಗರಾಜ್ ಅಡಿಗ ಸ್ವಾಗತಿಸಿದರು. ಕಾಲೇಜಿನ ಉಪನ್ಯಾಸಕ ಸಹ ಶಿಬಿರಾಧಿಕಾರಿ ವಾಸುದೇವ ಉಡುಪ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕಿ ಸಹ ಶಿಬಿರಾಧಿಕಾರಿ ಜ್ಯೋತಿ ಶೆಟ್ಟಿ ವಂದಿಸಿದರು.