ಉಡುಪಿ : ಲಕ್ಷ್ಮಿ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಚ್ಐವಿ ಮತ್ತು ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ಐಕ್ಯುಎಸಿ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬೈಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮುಖ್ಯ ಸಲಹೆಗಾರ ಶ್ರೀಮತಿ ವಸಂತಿ ನಾಯಕ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಆರೋಗ್ಯವೇ ಭಾಗ್ಯ. ವಿಶೇಷವಾಗಿ ಇಂದಿನ ಕಾಲದಲ್ಲಿ ಕ್ಯಾನ್ಸರ್, ಏಡ್ಸ್ ಮುಂತಾದ ಮಾರಕ ರೋಗಗಳ ಬಗ್ಗೆ ವಿದ್ಯಾರ್ಥಿಗಳು ತಿಳಿಹೊಂದಿ ಜಾಗೃತರಾಗುವುದು ಅತಿ ಮುಖ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ್, ವೈಯಕ್ತಿಕ ಆರೋಗ್ಯದ ಜೊತೆಗೆ ಸ್ವಚ್ಛ ಪರಿಸರವೂ ಅಗತ್ಯ. ಆರೋಗ್ಯಕರ ವಾತಾವರಣವೇ ನೆಮ್ಮದಿಯ ಬದುಕಿಗೆ ಕಾರಣ ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ಘಟಕಾಧಿಕಾರಿ ಡಾ. ಪ್ರಕಾಶ್ ಕೆ, ಕಾಲೇಜಿನ ಬೋಧಕ–ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



