ಕೋಟೇಶ್ವರ: ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾಜಿಕ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಷ್ಟು ಸೇವೆಯನ್ನು ಸಲ್ಲಿಸಲು ಕೆಲವು ಸಮಾನ ಮನಸ್ಕರ ಜೊತೆಗೂಡಿ ನಿರ್ಮಿತವಾದ ಸಂಸ್ಥೆಯೇ ಕೋಟೇಶ್ವರ ಸೇವಾ ಟ್ರಸ್ಟ್ ಕೋಟೇಶ್ವರ ಇದರ ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ನೂತನ ಕಚೇರಿಯನ್ನು ಪರಮಪೂಜ್ಯ ಶ್ರೀ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರಿಂದ ನೂತನ ಕಚೇರಿ ಉದ್ಘಾಟಿಸಿ ತದನಂತರ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು.

ಈ ಧಾರ್ಮಿಕ ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಕೋಟೇಶ್ವರ ಸೇವಾ ಟ್ರಸ್ಟ್ ಇದರ ಅಧ್ಯಕ್ಷರಾದ ಗೋಪಾಡಿ ಶ್ರೀನಿವಾಸರಾವ್ ವಹಿಸಿದ್ದರು. ಈ ಸಂದರ್ಭದಲ್ಲಿ ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ, ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಾಗಿಣಿ ದೇವಾಡಿಗ, ಬೀಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ.ಪ್ರಕಾಶ್ ಜಿ .ಪೂಜಾರಿ, ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನ ದೇವಸ್ಥಾನ ಸಮಿತಿ ಅಧ್ಯಕ್ಷ ಕೆ ಗೋಪಾಲಕೃಷ್ಣ ಶೆಟ್ಟಿ ಮಾರ್ಕೋಡು ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.