ಕುಂದಾಪುರ : ವಿದ್ಯಾರ್ಥಿಗಳು ಸ್ಪಷ್ಟವಾದ ಗುರಿ ಮತ್ತು ಶಿಸ್ತಿನ ಓದನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಂಡಾಗ ನಾಟಾ (ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್) ದಂತಹ ಸ್ಪರ್ಧಾತ್ಮಕ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಲು ಸಾಧ್ಯ,ಆ ಮೂಲಕ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದು ಎಂದು ಡಿಸೈನ್ ವೆನ್ಯೂ ಇದರ ಸಹ ಸಂಸ್ಥಾಪಕರಾದ ಚಂದ್ರಶೇಖರ್ ಬೆಂಗಳೂರು ತಿಳಿಸಿದರು.

ಅವರು ಜನತಾ ಪಿಯು ಕಾಲೇಜ್ ಹೆಮ್ಮಾಡಿಯಲ್ಲಿ ನಾಟಾ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳನ್ನು ದೇಶದ ಅತ್ಯುತ್ತಮ ಬಿ. ಆರ್ಕ್ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವಂತೆ ಪ್ರೆರೇಪಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ರಮೇಶ್ ಪೂಜಾರಿ, ಕಾಲೇಜಿನ ನಾಟಾ ಸ್ಪರ್ಧಾತ್ಮಕ ಪರೀಕ್ಷೆಯ ಸಂಯೋಜಕರಾದ ಅಕ್ಷಯ್ ಶೆಟ್ಟಿ ಉಪಸ್ಥಿತರಿದ್ದರು.ಉಪನ್ಯಾಸಕರಾದ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.
