Thursday, October 23, 2025

spot_img

ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ನಿವೇಶನ ಮಂಜೂರಾಗಿರುವ ಘಟಕಗಳನ್ನು ಕೂಡಲೇ ಸ್ಥಾಪಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ : ಕೈಗಾರಿಕೆಗಳ ಸ್ಥಾಪನೆಗೆ ನಿವೇಶನ ಮಂಜೂರಾಗಿರುವ ಕೈಗಾರಿಕೋದ್ಯಮಿಗಳು ಘಟಕಗಳನ್ನು ಕೂಡಲೇ ಸ್ಥಾಪಿಸಬೇಕು. ಹೆಚ್ಚುವರಿ ಕಾಲಾವಕಾಶ ಕಲ್ಪಿಸುವುದಿಲ್ಲ. ನಿವೇಶನವನ್ನು ಮರುಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

 ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು ನಿವೇಶನವನ್ನು ನೀಡಿದ್ದರೂ ಸಹ ಕೈಗಾರಿಕಾ ಯೋಜನೆಗಳ ಅನುಷ್ಠಾನವನ್ನು ಕಾಲಮಿತಿಯೊಳಗೆ ಪ್ರಾರಂಭಿಸಿರುವುದಿಲ್ಲ. ಘಟಕಗಳ ಸ್ಥಾಪನೆಗೆ ಸಮರ್ಪಕ ಕಾರಣಗಳು ಕಂಡುಬರದೇ ಇದ್ದಲ್ಲಿ ಅಂತಹ ನಿವೇಶನಗಳನ್ನು ಕೈಗಾರಿಕೆ ಪ್ರಾರಂಭಿಸಲು ನಿವೇಶನ ಕೋರಿ ಹೊಸದಾಗಿ ಅರ್ಜಿ ಸಲ್ಲಿಸಿರುವ ಇತರರಿಗೆ ಮರು ಹಂಚಿಕೆ ಮಾಡಲು ಕ್ರಮವಹಿಸಬೇಕೆಂದು ಸೂಚನೆ ನೀಡಿದರು.

ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಪಿ.ಎಂ ವಿಶ್ವಕರ್ಮ ಯೋಜನೆಯ 6274 ಫಲಾನುಭವಿಗಳಿಗೆ ಈಗಾಗಲೇ ಕೌಶಲ್ಯಾಭಿವೃದ್ಧಿ ತರಬೇತಿನೀಡಲಾಗಿದೆ. 3916 ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಲು ಸಾಲ ಸೌಲಭ್ಯ ಮಂಜೂರಾಗಿದ್ದು, 3573 ಫಲಾನುಭವಿಗಳ ಖಾತೆಗೆ ಆರ್ಥಿಕ ಸಹಾಯಧನವನ್ನು ಪಾವತಿಸಲಾಗಿದೆ ಎಂದ ಅವರು ಈ ಯೋಜನೆಯಡಿ ಆಯ್ಕೆಯಾದವರಿಗೆ ಕೌಶಲ್ಯ ತರಬೇತಿಗಳನ್ನು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ನೀಡುವುದರ ಜೊತೆಗೆ ಬ್ಯಾಂಕ್‌ಗಳು ಆರ್ಥಿಕ ಸೌಲಭ್ಯವನ್ನು ಒದಗಿಸಬೇಕು ಎಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ವಸಂತ ಕಿಣಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ನಗರಸಭೆ ಆಯುಕ್ತ ಮಂಹಾತೇಶ ಹಂಗರಗಿ, ಖಾಸಿಯಾ ಪ್ರತಿನಿಧಿ ಹರೀಶ್ ಕುಂದರ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಜಿಲ್ಲೆಯ ಸಣ್ಣ ಕೈಗಾರಿಕಾ ಉದ್ದಿಮೆದಾರರು ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹೆಬ್ರಿ ತಾಲೂಕು ಶಿವಪುರದಲ್ಲಿ 74.84 ಎಕ್ರೆ, ಕೆರೆಬೆಟ್ಟುವಿನಲ್ಲಿ 38.75 ಎಕ್ರೆ, ನಿಟ್ಟೆಯಲ್ಲಿ 50.42 ಎಕ್ರೆ ಸೇರಿದಂತೆ ಒಟ್ಟು 165.98 ಎಕ್ರೆ ಜಮೀನಿನ ಗಡಿ ಗುರುತಿಸುವ ಕಾರ್ಯವನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಕೆ.ಐ.ಎ.ಡಿ.ಬಿ ಅಭಿಯಂತರರುಗಳಿಗೆ ಸೂಚಿಸಿದ ಅವರು, ಹೊಸ ಕೈಗಾರಿಕೆ ಪ್ರದೇಶಗಳ ವಿಸ್ತರಣೆಗೆ ಎಲ್ಲೂರು ಹಾಗೂ ಸಾಂತೂರು 941.98 ಎಕ್ರೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ.

ಸ್ವರೂಪ ಟಿ.ಕೆ (ಜಿಲ್ಲಾಧಿಕಾರಿ)

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles