Saturday, June 28, 2025

spot_img

ತೇಜಸ್ವಿ ಸೂರ್ಯ ದಂಪತಿ : ಕಾಪು ಮಾರಿಯಮ್ಮ ದೇವಸ್ಥಾನ ಭೇಟಿ

ಕಾಪು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ದಂಪತಿ ಉಡುಪಿ ಭಾಗಕ್ಕೆ ಬಂದಿದ್ದಾಗ ಉಡುಪಿ ಶ್ರೀ ಕೃಷ್ಣ ಮಠ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿದಂತೆ ಅನೇಕ ಕಡೆ ಭೇಟಿ ನೀಡಿದ್ದು, ಸಂಜೆ ದೆಹಲಿಗೆ ಹೊರಡುವ ಮುನ್ನ ಕಾಪು ಮಾರಿಯಮ್ಮನ ದರುಶನ ಪಡೆದರು. ಈ ವೇಳೆ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಸಮ್ಮುಖದಲ್ಲಿ ದಂಪತಿಗಳಿಗೆ ಅಮ್ಮನ ಅನುಗ್ರಹ ಪ್ರಸಾದವನ್ನು ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರು ನೀಡಿದರು.

ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮಾಧವ ಆರ್. ಪಾಲನ್, ಕಚೇರಿ ನಿರ್ವಹಣಾ ಸಮಿತಿಯ ಮುಖ್ಯ ಸಂಚಾಲಕ ಸುನಿಲ್ ಎಸ್. ಪೂಜಾರಿ, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾಂಜಲಿ ಎಂ. ಸುವರ್ಣ, ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್, ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಸಂಚಾಲಕಿ ಅನಿತಾ ಹೆಗ್ಡೆ, ದೇವಳದ ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles