Tuesday, March 3, 2026

spot_img

ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ..

ಉಡುಪಿ : ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಒಟ್ಟು 2 ದೇವಸ್ಥಾನಗಳಿಗೆ ಮತ್ತು ಈಗಾಗಲೇ ರಚನೆಗೊಂಡಿರುವ 2 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಒಂದು ಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

 ಪ್ರವರ್ಗ ಸಿ ದೇವಸ್ಥಾನಗಳ ವಿವರ: ಕುಂದಾಪುರ ತಾಲೂಕು ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಉಪ್ಪಿನಕುದ್ರು, ಶ್ರೀ ಶಾಂತೇಶ್ವರ ದೇವಸ್ಥಾನ ಹೊಸಂಗಡಿ. ಮರುಪ್ರಕಟಣೆ ಹೊರಡಿಸಲಾದ ದೇವಸ್ಥಾನಗಳ ವಿವರ: ಉಡುಪಿ ತಾಲೂಕು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪೆರಂಪಳ್ಳಿ, ಶಿವಳ್ಳಿ(ಸಾಮಾನ್ಯ ವರ್ಗದ ಒಂದು ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ) ಕುಂದಾಪುರ ತಾಲೂಕು ಶ್ರೀ ಬೆಳವಿನಮಕ್ಕಿ ಶ್ರೀ ಮಹಾಗಣಪತಿ ದೇವಸ್ಥಾನ ಸೇನಾಪುರ(ಸಾಮಾನ್ಯ ವರ್ಗದ ಒಂದು ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ) ಕಾಪು ತಾಲೂಕು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕಳತ್ತೂರು (ಸಾಮಾನ್ಯ ವರ್ಗದ ಒಂದು ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ).

ಕನಿಷ್ಠ 25 ವರ್ಷ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಿಗದಿತ ನಮೂನೆ-1(ಬಿ) (22 ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 30 ರ ಒಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206, ಬಿ ಬ್ಲಾಕ್, ಜಿಲ್ಲಾ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles