Friday, March 6, 2026

spot_img

ದ್ವಿಚಕ್ರ ವಾಹನ ಕಳ್ಳನ ಬಂಧನ: ಐದು ಸ್ಕೂಟರ್‌ಗಳು ವಶಕ್ಕೆ..

ಉಡುಪಿ : ಬಂಟಕಲ್ಲುವಿನಲ್ಲಿ ನಡೆದ ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿ ಶಿರ್ವ ಪೊಲೀಸರು ಆರೋಪಿಯನ್ನು ಬಂಧಿಸಿ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಡಿ.05ರಂದು  ಗುಣವತಿ ಅವರ ಪುತ್ರ ಕೌಶಿಕ್ ಅವರು ಹೊಂಡಾ ಆಕ್ಟಿವಾ ಸ್ಕೂಟರ್ ಅನ್ನು ಬಂಟಕಲ್ಲುವಿನ ಮದ್ವವಾದಿರಾಜ ಇಂಜಿನಿಯರಿಂಗ್ ಕಾಲೇಜಿಗೆ ತೆಗೆದುಕೊಂಡು ಹೋಗಿ, ಊಟದ ವೇಳೆ ದುರ್ಗಾ ಪರಮೇಶ್ವರಿ ದೇವಸ್ಥಾನದ ಬಳಿ ಪಾರ್ಕಿಂಗ್ ಮಾಡಿದ್ದರು. ಊಟದ ನಂತರ ಮರಳಿ ಬಂದಾಗ ಸ್ಕೂಟರ್ ಕಳವು ಆಗಿರುವುದು ಬೆಳಕಿಗೆ ಬಂದಿತ್ತು. ಕಳವಾದ ವಾಹನದ ಅಂದಾಜು ಮೌಲ್ಯ ರೂ.60,000 ಆಗಿದೆ.

 ಪ್ರಕರಣ ದಾಖಲಿಸಿಕೊಂಡ ಶಿರ್ವ ಪೊಲೀಸರು ವಿಶೇಷ ತಂಡ ರಚಿಸಿ ಉಡುಪಿ, ಮಲ್ಪೆ, ಕಾರ್ಕಳ, ಧರ್ಮಸ್ಥಳ ಸೇರಿದಂತೆ ವಿವಿಧ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿ ಓಂ ಕೋಲಾರ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ವಿಚಾರಣೆಯ ವೇಳೆ ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯೊಂದನ್ನು ಸೇರಿ ಕಾಪು ಹಾಗೂ ಬೆಂಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಸಂಬಂಧಿಸಿದ ಒಟ್ಟು ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕ ಡಾ. ಹರ್ಷ ಪ್ರಿಯಂವದಾ ಹಾಗೂ ಕಾಪು ವೃತ್ತ ನಿರೀಕ್ಷಕ ಅಜಮತ್ ಅಲಿ ಅವರ ಮೇಲ್ವಿಚಾರಣೆಯಲ್ಲಿ ಶಿರ್ವ ಪೊಲೀಸ್ ಠಾಣಾಧಿಕಾರಿಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles