Sunday, September 20, 2026

spot_img

ನದಿಗೆ ಬಿದ್ದ ಕಾರು: ಚಾಲಕ, 3 ವರ್ಷದ ಮಗು ರಕ್ಷಣೆ

ಉಡುಪಿ: ಕೊಡವೂರು ಚೆನ್ನಂಗಡಿ ಸಮೀಪ ಕಾರೊಂದು ನದಿಗೆ ಬಿದ್ದಿದ್ದು, ಅದರಲ್ಲಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ.

ಕಾರು ನದಿಗೆ ಬಿದ್ದಿರುವುದನ್ನು ಗಮನಿಸಿದ ಚೆನ್ನಂಗಡಿ ನಿವಾಸಿ ಮೀನುಗಾರ ಗಣೇಶ್‌ ಅವರು ಕ್ಷಣವೂ ತಡ ಮಾಡದೆ ನದಿಗೆ ಧುಮುಕಿದ್ದಾರೆ. ಕಾರಿನೊಳಗೆ ಸಿಲುಕಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

ನೀರಿನ ಸೆಳೆತದ ನಡುವೆಯೂ ಧೈರ್ಯದಿಂದ ಕಾರ್ಯಾಚರಣೆ ನಡೆಸಿ ಇಬ್ಬರ ಜೀವ ಉಳಿಸಿದ ಗಣೇಶ್‌ ಅವರ ಸಮಯಪ್ರಜ್ಞೆ ಮತ್ತು ಸಾಹಸಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಪಾಯದ ಸಂದರ್ಭದಲ್ಲೂ ಪ್ರಾಣದ ಹಂಗು ತೊರೆದು ನೆರವಿಗೆ ಧಾವಿಸಿದ ಅವರ ಮಾನವೀಯ ನಡೆ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles