ಉಡುಪಿ : ನಾಡ ದೋಣಿ ಮಗುಚಿ ಬಿದ್ದ ಪರಿಣಾಮ ಮೀನುಗಾರ ಸಾವನ್ನಪ್ಪಿದ ಘಟನೆ ಮಲ್ಪರ ಪಡುಕೆರೆ ಕಡಲ ತೀರದಲ್ಲಿ ನಡೆದಿದೆ. ಪಿತ್ರೋಡಿ ನಿವಾಸಿ ಮೀನುಗಾರ ನೀಲು (48) ಮೃತಪಟ್ಟ ಮೀನುಗಾರ. ಇಂದು ಕಡಲ ತೀರದಲ್ಲಿ ಗಾಳಿ ಮಳೆಯ ತೀವ್ರತೆ ಜೋರಾಗಿತ್ತು, ಸಮುದ್ರದ ಅಲೆಯ ಹೊಡೆತಕ್ಕೆ ನೀಲು ಅವರಿದ್ದ ನಾಡದೋಣಿ ಮಗುಚಿ ಬಿದ್ದಿದೆ. ಈ ವೇಳೆ ನೀಲು ಅವರು ದೋಣಿಯ ಆಡಿ, ಬಲೆಗಳ ನಡುವೆ ಸಿಲುಕಿ ಮೃತಪಟ್ಟಿದ್ದಾರೆ.

ಆಪದ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಮೃತದೇಹವನ್ನು ಮೇಲಕ್ಕೆತ್ತಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲು ಸಹಕರಿಸಿದ್ದಾರೆ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.