Saturday, April 25, 2026

spot_img

ನಾಪತ್ತೆಯಾದ ಉಪನ್ಯಾಸಕರ ಶವ ಬಾವಿಯಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವ ಮನೆಯ ವಠಾರದಲ್ಲಿದ್ದ ಬಾವಿಯಲ್ಲಿ ಶನಿವಾರ ಪತ್ತೆಯಾಗಿ, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಮೃತರನ್ನು ಶಿರಸಿ ಮೂಲದ ಗಣಪತಿ ಭಟ್ (55) ಎಂದು ಗುರುತಿಸಲಾಗಿದ್ದು, ಅವರು ಅವಿವಾಹಿತರಾಗಿದ್ದರು.

ನಗರದ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಎಂ.ಜಿ.ಎಂ ಕಾಲೇಜು ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೃತರು ನಾಪತ್ತೆಯಾಗಿದ್ದ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿತ್ತು.

ಅಗ್ನಿಶಾಮಕ ದಳದ ನೆರವಿನಿಂದ ಶವವನ್ನು ಮೇಲಕ್ಕೆತ್ತಲಾಯಿತು. ನಗರ ಪೊಲೀಸ್ ಠಾಣೆಯ ಎಸ್ಐ ನಾರಾಯಣ ಹಾಗೂ ಸಿಬ್ಬಂದಿಗಳು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಹಕರಿಸಿದರು. ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles