Wednesday, March 4, 2026

spot_img

ನಿಯಂತ್ರಣ ತಪ್ಪಿ ಆಟೋ ಪಲ್ಟಿ – ಚಾಲಕ ಮೃತ್ಯು..

ಉಡುಪಿ : ಕೋಟ ಸಮೀಪದ ಸಾಲಿಗ್ರಾಮದ ಹಾಡಿಮನೆ ಹೋಟೆಲ್ ಮುಂಭಾಗದಲ್ಲಿ ನಡೆದ ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಭೋಜ ಪೂಜಾರಿ (52) ಎಂದು ಗುರುತಿಸಲಾಗಿದೆ.

 ಮಂಗಳವಾರ ಮಧ್ಯಾಹ್ನ ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ರಸ್ತೆಯ ಹಂಪ್ಸ್‌ ಮೇಲೆ ಏರಿದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಭೋಜ ಪೂಜಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

 ಕಾರ್ಕಡ ನಿವಾಸಿಯಾದ ಭೋಜ ಪೂಜಾರಿ ಸಾಲಿಗ್ರಾಮ ರಿಕ್ಷಾ ಚಾಲಕ ಹಾಗೂ ಮಾಲಕರ ಸಂಘದ ಸದಸ್ಯರಾಗಿದ್ದರು. ಜೊತೆಗೆ ಹಲವು ಸಂಘ–ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ. ಈ ಕುರಿತು ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles