Monday, March 9, 2026

spot_img

ಪಂಚವರ್ಣ ಮಹಿಳಾ ಮಂಡಲದಿಂದ ಲೀಲಾವತಿ ಗಂಗಾಧರರಿಗೆ ವಿಶ್ವ ಮಹಿಳಾ ದಿನಾಚರಣೆ ಪುರಸ್ಕಾರ.

ಉಡುಪಿ: ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಇತ್ತೀಚಿನ ದಿನಗಳಲ್ಲಿ ವಿವಿಧ ಪ್ರಮುಖ ಹುದ್ದೆಗಳನ್ನು ಅಲಂಕರಿಸಿರುವ ಮಹಿಳೆಯರ ಕಾರ್ಯವೈಖರಿ ಇದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು.

 ಕೋಟದ ಸಮುದ್ಯತಾ ಬ್ಯಾಂಕೇಟ್ ಹಾಲ್‌ನಲ್ಲಿ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ, ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಹಾಗೂ ಸ್ನೇಹಕೂಟ ಮಣೂರು ಸಹಯೋಗದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಶುಭಾಶಯ ತಿಳಿಸಿ ಮಾತನಾಡಿದರು. ದೇಶದ ಒಟ್ಟು ವ್ಯವಸ್ಥೆಯಲ್ಲಿ ಮಹಿಳೆ ಮುಂಚೂಣಿಯಲ್ಲಿದ್ದಾಳೆ. ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಶೀಘ್ರದಲ್ಲಿ ಆಗಲಿ ಎಂಬ ಆಶಯ ವ್ಯಕ್ತಪಡಿಸಿದರು. ಸಾಧಕರನ್ನು ಗುರುತಿಸುವ ಕಾರ್ಯ ಅತ್ಯಂತ ಶ್ರೇಷ್ಠವಾಗಿದ್ದು, ಪಂಚವರ್ಣ ಸಂಸ್ಥೆಯ ಗೌರವ ದೊರಕುವುದು ಸಾಧಕರಿಗೆ ಹೆಮ್ಮೆಯ ವಿಷಯ ಎಂದರು.

??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಸಾಲಿಗ್ರಾಮ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಸುಲತಾ ಎಸ್. ಹೆಗ್ಡೆ ಅಭಿನಂದನಾ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಪಂಚವರ್ಣ ಸಾಧಕ ಮಹಿಳಾ ಪುರಸ್ಕಾರವನ್ನು ಸಾಸ್ತಾನದ ಲೀಲಾವತಿ ಗಂಗಾಧರ ಪೂಜಾರಿ ಅವರಿಗೆ ಪ್ರದಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ವಹಿಸಿದ್ದರು. ಸ್ನೇಹಕೂಟ ಮಣೂರು ಅಧ್ಯಕ್ಷೆ ಭಾರತಿ ವಿ. ಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಸಾಸ್ತಾನ ಮಹಿಳಾ ಮಂಡಲದ ಅಧ್ಯಕ್ಷೆ ಸುಮಿತ್ರಾ ಸುಧಾಕರ್ ಹಾಗೂ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಸದಸ್ಯೆ ಜಯಂತಿ ಕೋಟ್ಯಾನ್ ಪ್ರಾರ್ಥಿಸಿದರು. ಸ್ನೇಹಕೂಟದ ವಿನಯ ಉಡುಪ ಸನ್ಮಾನ ಪತ್ರ ವಾಚಿಸಿದರು. ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ವಸಂತಿ ಹಂದಟ್ಟು ವಂದಿಸಿದರು. ದಿನೇಶ್ ಆಚಾರ್ಯ ಮತ್ತು ಪುಷ್ಪ ಹಂದಟ್ಟು ಸಹಕರಿಸಿದರು. ಸಮುದ್ಯತಾ ಗ್ರೂಪ್ಸ್ ಸಂಸ್ಥೆ ಕಾರ್ಯಕ್ರಮಕ್ಕೆ ಸಹಕಾರ ನೀಡಿತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles