ಉಡುಪಿ : ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ದೇಶಾದ್ಯಂತ ‘ಸಂಘಟನ್ ಸೃಜನ್’ ಅಭಿಯಾನ ನಡೆಯುತ್ತಿದ್ದು, ಇದರ ಮೂಲಕ ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೂ ವಿವಿಧ ಜವಾಬ್ದಾರಿ ಹಾಗೂ ಅಧಿಕಾರದ ಸ್ಥಾನಗಳನ್ನು ಪಡೆಯುವ ಅವಕಾಶ ದೊರೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಅಭಿಯಾನದ ವೀಕ್ಷಕ ಐವನ್ ಡಿ’ಸೋಜ ಹೇಳಿದರು. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸಂಘಟನ್ ಸೃಜನ್ ಅಭಿಯಾನ–2ಕ್ಕೆ ಸಂಬಂಧಿಸಿದ ಸಭೆಯಲ್ಲಿ ಅವರು ಮಾತನಾಡಿದರು.

ಈ ಹಿಂದೆ ಪಕ್ಷದಲ್ಲಿ ಪ್ರಮುಖ ಸ್ಥಾನಮಾನಗಳು ಹಾಗೂ ಅಧಿಕಾರದ ಜವಾಬ್ದಾರಿಗಳು ನಾಯಕರಿಗೆ ಮಾತ್ರ ಸೀಮಿತವಾಗಿದ್ದಂತಹ ವಾತಾವರಣವಿತ್ತು. ಆದರೆ ಸಂಘಟನ್ ಸೃಜನ್ ಅಭಿಯಾನದ ಮೂಲಕ ಪಕ್ಷಕ್ಕಾಗಿ ನಿರಂತರವಾಗಿ ದುಡಿಯುತ್ತಿರುವ ಸಾಮಾನ್ಯ ಕಾರ್ಯಕರ್ತರಿಗೂ ಸಂಘಟನೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸುವ ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಹೆಚ್ಚುವುದರ ಜತೆಗೆ ಪಕ್ಷದ ಸಂಘಟನೆ ಇನ್ನಷ್ಟು ಗಟ್ಟಿಯಾಗಲಿದೆ ಎಂದರು. ಅಭಿಯಾನದಡಿ ನಿಗದಿತ ಕಾಲಮಿತಿಯೊಳಗೆ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು. ಪ್ರತಿಯೊಂದು ಹಂತದಲ್ಲೂ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯಗಳನ್ನು ಪರಿಗಣಿಸಿ, ಸಾಧ್ಯವಾದಷ್ಟು ಸಹಮತದೊಂದಿಗೆ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಐವನ್ ಡಿ’ಸೋಜ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮಾತನಾಡಿ, ಸಂಘಟನ್ ಸೃಜನ್’ ಅಭಿಯಾನವು ಕಾಂಗ್ರೆಸ್ ಪಕ್ಷದ ಸಂಘಟನಾ ಬಲವರ್ಧನೆಗೆ ರಹದಾರಿಯಾಗಿದೆ. ಅಭಿಯಾನದ ಪ್ರತಿಯೊಂದು ಪ್ರಕ್ರಿಯೆಯೂ ಉಸ್ತುವಾರಿಗಳ ಮಾರ್ಗದರ್ಶನದಲ್ಲಿ ನಡೆಯಲಿದೆ. ಪಕ್ಷದ ಸಂಘಟನೆಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡು ಕೆಲಸ ಮಾಡುತ್ತಿರುವ ಕಾರ್ಯಕರ್ತರನ್ನು ವಿವಿಧ ಹುದ್ದೆಗಳಿಗೆ ಪರಿಗಣಿಸಲಾಗುವುದು ಎಂದು ಹೇಳಿದರು. ಸಭೆಯಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಅಬ್ದುಲ್ ರಾವೂತ್, ಶಾಲೇಟ್ ಪಿಂಟೋ, ಮಾಜಿ ಶಾಸಕರಾದ ಸುಕುಮಾರ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ರಾಜು ಪೂಜಾರಿ, ಮಲ್ಯಾಡಿ ಶಿವರಾಮ ಶೆಟ್ಟಿ, ಸುರೇಂದ್ರ ಶೆಟ್ಟಿ, ಪ್ರಶಾಂತ ಜತ್ತನ್ನ, ಬಿ. ನರಸಿಂಹಮೂರ್ತಿ, ಜ್ಯೋತಿ ಹೆಬ್ಬಾರ್, ಹರೀಶ್ ಕಿಣಿ, ಸಂತೋಷ್ ಕುಲಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್, ರಾಘವೇಂದ್ರ ಶೆಟ್ಟಿ, ವೈ. ಸುಕುಮಾರ್, ಸದಾನಂದ ಶೆಟ್ಟಿ, ತಿಮ್ಮ ಪೂಜಾರಿ, ಗೋಪಿನಾಥ್ ಭಟ್, ಶುಭದ ರಾವ್, ಅರವಿಂದ ಪೂಜಾರಿ, ಪ್ರದೀಪ್ ಕುಮಾರ್, ಕುಶಲ ಶೆಟ್ಟಿ, ಕೃಷ್ಣ ಶೆಟ್ಟಿ ಬಜಗೋಳಿ, ಹಿರಿಯಣ್ಣ, ಗೀತಾ ವಾಗ್ಳೆ, ಸರಸು ಬಂಗೇರ, ರೋಶನ್ ಶೆಟ್ಟಿ, ಡಾ. ಸುನೀತಾ ಶೆಟ್ಟಿ, ದಿನೇಶ್ ಪುತ್ರನ್, ದಿವಾಕರ ಕುಂದರ್, ಮುರಳಿ ಶೆಟ್ಟಿ, ನವೀನ್ ಚಂದ್ರ ಶೆಟ್ಟಿ, ಪ್ರಖ್ಯಾತ ಶೆಟ್ಟಿ, ಕೃಷ್ಣಮೂರ್ತಿ ಕಾರ್ಕಳ, ಸುನಿಲ್ ಬಂಗೇರ, ಬಿಪಿನ್ ಚಂದ್ರಪಾಲ್ ನಕ್ರೆ, ವಿಕಾಸ್ ಹೆಗ್ಡೆ, ರೋಶನಿ ಒಲಿವರಾ, ಮಮತಾ ಶೆಟ್ಟಿ, ಉದ್ಯಾವರ ನಾಗೇಶ್ ಕುಮಾರ್, ಹರೀಶ್ ಶೆಟ್ಟಿ ಪಾಂಗಾಳ, ಶಶಿಧರ ಶೆಟ್ಟಿ ಎಲ್ಲೂರು, ಶರ್ಪುದ್ದೀನ್ ಶೇಖ್, ಅಬ್ದುಲ್ ಅಜೀಜ್, ಶಂಕರ್ ಕುಂದರ್, ಮಹಾಬಲ ಕುಂದರ್, ಶಬ್ಬಿರ್ ಅಹ್ಮದ್, ಬಾಲಕೃಷ್ಣ ಪೂಜಾರಿ, ದಿವಾಕರ್ ಕುಂದರ್, ನವೀನ್ ಶೆಟ್ಟಿ ಹಾಗೂ ಸುರೇಶ್ ಶೆಟ್ಟಿ ಬನ್ನಂಜೆ ಮತ್ತಿತರರು ಉಪಸ್ಥಿತರಿದ್ದರು. ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬೀಬ್ ಆಲಿ ವಂದಿಸಿದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ಕಾರ್ಯಕ್ರಮ ನಿರ್ವಹಿಸಿದರು.


