ಉಡುಪಿ : ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಶಾಖೆ ಇವರ ಆಶ್ರಯದಲ್ಲಿ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ
ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇವರ ಸಹಯೋಗದೊಂದಿಗೆ ಒಂದು ದಿನದ ಪ್ರಥಮ ಚಿಕಿತ್ಸಾ ತರಬೇತಿ
ಶಿಬಿರವು ಇತ್ತೀಚೆಗೆ ಉಡುಪಿಯ ಕಡೆಕಾರು ಬಿಲ್ಲವ ಭವನದಲ್ಲಿ ನಡೆಯಿತು.

ಡಾ. ಎ.ವಿ. ಬಾಳಿಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಕಾವ್ಯ ಟಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ
ತರಬೇತಿ ನೀಡಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಬ್ದುಲ್ ರಜಾಕ್ ಅಧ್ಯಕ್ಷತೆ ವಹಿಸಿದ್ದರು. ಅಧ್ಯಾಪಕ ಡಾ. ಮಣಿಭೂಷಣ್ ಡಿಸೋಜ, ಪುರುಷೋತ್ತಮ ಪ್ರಣೀತ್ ತೆಂಡುಲ್ಕರ್, ಡಾ. ಸುಜಾತಾ ಶೇಟ್, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ನಿಕೇತನ ಸ್ವಾಗತಿಸಿ, ಯೋಜನಾಧಿಕಾರಿ ವಿದ್ಯಾ. ಡಿ. ವಂದಿಸಿದರು. 100ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಬಿರಾರ್ಥಿಗಳಾಗಿ ಭಾಗವಹಿಸಿದ್ದರು.