ಉಡುಪಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಹಿರಿಯಡಕದ ದೇವಾಡಿಗ ಸಭಾಭವನದಲ್ಲಿ ಗುರುವಾರ ಉಚಿತ ಆರೋಗ್ಯ ತಪಾಸಣಾ ಹಾಗೂ ಕಣ್ಣಿನ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಯಿತು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಶಿಬಿರವನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

ಆದರ್ಶ ಆಸ್ಪತ್ರೆ ಉಡುಪಿ ಹಾಗೂ ಪ್ರಸಾದ್ ನೇತ್ರಾಲಯ ಉಡುಪಿ ಸಹಭಾಗಿತ್ವದಲ್ಲಿ ಶಿಬಿರವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಹಾಗೂ ಕಣ್ಣಿನ ತಪಾಸಣೆಯ ಸೌಲಭ್ಯ ಕಲ್ಪಿಸಲಾಯಿತು.

ಶಿಬಿರದಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ತಪಾಸಣೆ ನಡೆಸಿ, ಅಗತ್ಯ ವೈದ್ಯಕೀಯ ಸಲಹೆಗಳನ್ನು ನೀಡಲಾಯಿತು. ಕಣ್ಣಿನ ತಪಾಸಣೆಯ ಮೂಲಕ ದೃಷ್ಟಿ ಸಂಬಂಧಿತ ಸಮಸ್ಯೆಗಳನ್ನು ಗುರುತಿಸಿ ಸೂಕ್ತ ವೈದ್ಯಕೀಯ ಮಾರ್ಗದರ್ಶನ ನೀಡುವ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಆದರ್ಶ ಆಸ್ಪತ್ರೆಯ ಡಾ. ಚಂದ್ರಶೇಖರ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷ ಸಂದೀಪ್ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು ಹಾಗೂ ಗೋಪಾಲಕೃಷ್ಣ ರಾವ್, ಬೊಮ್ಮರಬೆಟ್ಟು ಶಕ್ತಿ ಕೇಂದ್ರದ ಉದಯ್ ಶೆಟ್ಟಿ, ವಿನಯ್ ಪೂಜಾರಿ, ದಯಾನಂದ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.



