Monday, March 2, 2026

spot_img

ಪ್ರಧಾನಿ ಮೋದಿ ಭೇಟಿಯ ಮುನ್ನ ಉಡುಪಿಯಲ್ಲಿ ಭದ್ರತಾ ಪರಿಶೀಲನೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಸ್ಥಳ ಪರಿಶೀಲನೆ ನಡೆಸಿದರು. 

ಜಿಲ್ಲಾಧಿಕಾರಿಗಳು ಆದಿ ಉಡುಪಿಯ ಹೆಲಿಪ್ಯಾಡ್‌ಗೆ ಭೇಟಿ ನೀಡಿ, ಪ್ರಧಾನಿಯ ಆಗಮನಕ್ಕೆ ಮಾಡಲಾಗುತ್ತಿರುವ ವ್ಯವಸ್ಥೆ, ಭದ್ರತಾ ಕ್ರಮಗಳು ಮತ್ತು ಕಾಮಗಾರಿಗಳನ್ನು ಪರಿಶೀಲಿಸಿದರು.

 ಬಳಿಕ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್ ಬಳಿಯಲ್ಲಿ ಹಾಕಿರುವ ಚಪ್ಪರವನ್ನು ವೀಕ್ಷಿಸಿ ಮಠದ ಆಡಳಿತದಿಂದ ಅಗತ್ಯ ಮಾಹಿತಿ ಸಂಗ್ರಹಿಸಿದರು. ಪ್ರಧಾನಿಯ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ಹಾಗೂ ಸಾರಿಗೆ ವ್ಯವಸ್ಥೆಗಳು ಸಮರ್ಪಕವಾಗಿರಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್, ಡಿವೈಎಸ್ಪಿ ಪ್ರಭು ಡಿ.ಟಿ., ಪೌರಾಯುಕ್ತ ಮಹಾಂತೇಶ್ ಹಂಗರಗಿ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್ ಮಂಜುನಾಥ್ ಮೊದಲಾದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles