Sunday, April 12, 2026

spot_img

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ವಿದ್ಯುತ್ ದೀಪಾಲಂಕಾರ ಉದ್ಘಾಟನೆ

ಉಡುಪಿ: ಬನ್ನಂಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಅಂಗವಾಗಿ ವೈಭವಮಯ ವಿದ್ಯುತ್ ದೀಪಾಲಂಕಾರವನ್ನು ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ್ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲಿ ದೀಪ ಬೆಳಗುತ್ತೇವೊ ಅಲ್ಲಿ ಭಗವಂತನ ಸಾನಿಧ್ಯ ಇರುತ್ತದೆ. ಭಗವಂತನಲ್ಲಿ ನಮ್ಮ ಕಷ್ಟಗಳನ್ನು ಹಂಚಿಕೊಂಡಾಗ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಭಕ್ತಿಯಿಂದ ದೇವರ ಸೇವೆ ಮಾಡಿದರೆ ಬ್ರಹ್ಮಕಲಶೋತ್ಸವ ಯಶಸ್ವಿಯಾಗುತ್ತದೆ ಎಂದು ಹೇಳಿದರು. ದೇವರ ಕಾರ್ಯಗಳಲ್ಲಿ ಭಕ್ತರು ತನು-ಮನ-ಧನಗಳಿಂದ ಸಹಕರಿಸಿ ಅದನ್ನು ಯಶಸ್ವಿಗೊಳಿಸುವುದು ನಮ್ಮ ಸಂಪ್ರದಾಯ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ, ಪ್ರಧಾನ ಅರ್ಚಕ ವಾಸುದೇವ ಉಪಾಧ್ಯಾಯ, ಹಿರಿಯರಾದ ಭುಜಂಗ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್ ಕಾಂಚನ್ ಸೇರಿದಂತೆ ಸಮಿತಿಯ ಸದಸ್ಯರು, ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles