Wednesday, March 4, 2026

spot_img

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹತ್ಯಾಕಾಂಡ ಖಂಡನೆ – ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಗೆ ಮನವಿ

ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ಹತ್ಯಾಕಾಂಡ ಹಾಗೂ ಅಮಾನುಷ ದೌರ್ಜನ್ಯಗಳನ್ನು ಖಂಡಿಸಿ ಇಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂದೂಗಳ ಹತ್ಯೆ, ದೇವಾಲಯಗಳ ಧ್ವಂಸ ಹಾಗೂ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಂಭೀರವಾಗಿ ಪರಿಗಣಿಸಬೇಕು ಎಂದು ಸಮಿತಿಯ ಪದಾಧಿಕಾರಿಗಳು ಆಗ್ರಹಿಸಿದರು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಭಾರತ ಸರ್ಕಾರವು ಅಗತ್ಯ ರಾಜತಾಂತ್ರಿಕ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಅದೇ ವೇಳೆ, ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ದ್ವೇಷ ಭಾಷಣ ವಿಧೇಯಕವನ್ನು ತಕ್ಷಣವೇ ವಾಪಸ್ಸು ಪಡೆಯಬೇಕು ಎಂದು ಉಡುಪಿ ಜಿಲ್ಲಾಧಿಕಾರಿಗಳ ಮುಖೇನ ರಾಜ್ಯಪಾಲರಿಗೆ ಮತ್ತೊಂದು ಮನವಿ ಸಲ್ಲಿಸಲಾಯಿತು. ಈ ವಿಧೇಯಕವು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ಹಿಂದೂ ಸಮಾಜದ ಧಾರ್ಮಿಕ ಆಚರಣೆ, ಧರ್ಮಪ್ರಚಾರ ಹಾಗೂ ಸತ್ಯವಚನಕ್ಕೆ ಅಡ್ಡಿಯಾಗುವಂತಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿತು. ಈ ಸಂದರ್ಭದಲ್ಲಿ ಸಮಿತಿಯ ಪ್ರಮುಖರಾದ ವಿಶ್ವನಾಥ ನಾಯಕ್ ಸೇರಿದಂತೆ ಧರ್ಮಪ್ರೇಮಿಗಳಾದ ಶ್ರೀನಿವಾಸ ಗಾಂವ್ಸ್ಕಾರ್, ಹರಿಪ್ರಸಾದ್ ನಾಯಕ್, ಪ್ರಕಾಶ್, ಮಲ್ಲೇಶ ಹಾಗೂ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles