Saturday, February 7, 2026

spot_img

ಬೀಡಿನಗುಡ್ಡೆ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆ..

ಉಡುಪಿ: ಉಡುಪಿ ನಗರದ ಬೀಡಿನಗುಡ್ಡೆ ಪ್ರದೇಶದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಬಾಗಲಕೋಟೆ ಮೂಲದ ಬರ್ಮವ್ವ (15) ಎಂದು ಗುರುತಿಸಲಾಗಿದೆ.

ಬರ್ಮವ್ವ ಅವರು ಪೋಷಕರೊಂದಿಗೆ ಬೀಡಿನಗುಡ್ಡೆಯಲ್ಲಿರುವ ಗುಡಿಸಲಿನಲ್ಲಿ ವಾಸವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ಪಡೆದ ಉಡುಪಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮೃತ ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆತ್ಮಹತ್ಯೆಗೆ ಕಾರಣಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles