ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೊ ಯೋಜನೆಯ ಕುರಿತು ಜಿಲ್ಲೆ ಯಾದ್ಯಂತ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹಾಗೂ ಜಿಲ್ಲಾ ಪೊಲೀಸ್ ಅಧಿಕ್ಷಕ ಡಾ. ಅರುಣ್ ಕೆ ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕಿರ್ಣ ದ ಎದುರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ. ಕೆ, ಜಿಲ್ಲಾ ನಿರೂಪಣ ಅಧಿಕಾರಿ ಅನುರಾಧ ಹಾದಿಮನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು, ಜಿಲ್ಲಾಡಳಿತದ ಸಿಬ್ಬಂದಿಗಳು, ಕಲಾವಿದರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.