ಉಡುಪಿ: ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತರನ್ನು 22 ವರ್ಷದ ನಮೃತಾ ದೇವಾಡಿಗ ಎಂದು ಗುರುತಿಸಲಾಗಿದೆ.

ನೀಲಾವರ ಗ್ರಾಮದ ನಿವಾಸಿಯಾಗಿದ್ದ ನಮೃತಾ ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಯಾವುದೋ ಕಾರಣಕ್ಕೆ ಮನನೊಂದು ವಿಷ ಸೇವಿಸಿದ್ದ ಅವರನ್ನು ತಕ್ಷಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ನಮೃತಾ ಮೃತಪಟ್ಟಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


