ಉಡುಪಿ : ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧೆಡೆ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ವಿರುದ್ಧ ದಾಳಿ ನಡೆಸಿದ ಪೊಲೀಸರು, ಒಟ್ಟು 17 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.

ಹಾವಂಜಿ ಗ್ರಾಮದ ಮುಗ್ಗೇರಿ ಹಾಗೂ ಉಳ್ಳೂರು ಗ್ರಾಮದ ಅಮ್ಮುಂಜೆ ಪರಿಸರದ ಸ್ವರ್ಣ ನದಿಯಲ್ಲಿ ದೋಣಿಗಳ ಮೂಲಕ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರ ನಿರ್ದೇಶನದಂತೆ, ಹೆಚ್ಚುವರಿ ಎಸ್ಪಿ ಸುಧಾಕರ ನಾಯ್ಕ, ಡಿವೈಎಸ್ಪಿ ಡಿ.ಟಿ. ಪ್ರಭು ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಈ ದಾಳಿಯಲ್ಲಿ ಪೊಲೀಸ್ ಉಪನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಹಾಗೂ ಠಾಣಾ ಸಿಬ್ಬಂದಿ ಪಾಲ್ಗೊಂಡಿದ್ದರು.



