Saturday, July 5, 2025

spot_img

ಬ್ರಹ್ಮಾವರದಲ್ಲಿ ಕೃಷಿ ಮಹಾವಿದ್ಯಾಲಯ ಬೇಡಿಕೆ…

ಉಡುಪಿ: ಜಿಲ್ಲೆಯ ಬ್ರಹ್ಮಾವರದಲ್ಲಿ ಕೃಷಿ ಮಹಾವಿದ್ಯಾಲಯ ಸ್ಥಾಪಿಸಲು ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಅನುದಾನ ಒದಗಿಸಿ ಅನುಮೋದನೆ ನೀಡುವಂತೆ ಕರ್ನಾಟಕ ಪ್ರದೇಶ ಕೃಷಿಕ ಸಮಾಜ (ರಿ.) ಆಗ್ರಹಿಸಿದೆ. ಈ ಬಗ್ಗೆ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ ಮಾತನಾಡಿ, ಬ್ರಹ್ಮಾವರದಲ್ಲಿ ಕೃಷಿ ಮಹಾವಿದ್ಯಾಲಯವನ್ನು ಸ್ಥಾಪಿಸುವುದು ಕರಾವಳಿ ಭಾಗದ ಉಭಯ ಜಿಲ್ಲೆಗಳ ರೈತರ ಬಹುದಿನದ ಬೇಡಿಕೆಯಾಗಿದೆ. ಪ್ರಸ್ತುತವಿರುವ ಡಿಪ್ಲೋಮಾ ಕಾಲೇಜನ್ನು ಉನ್ನತೀಕರಿಸಿ ಕೃಷಿ ಮಹಾವಿದ್ಯಾಲಯವನ್ನಾಗಿ ಪರಿವರ್ತಿಸುವುದು ಈ ಭಾಗದ ರೈತರ ಮಕ್ಕಳ ಬಹುದಿನದ ಬೇಡಿಕೆ ಎಂದರು. 

ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನ ಕೇಂದ್ರ ಹಾಗು ಡಿಪ್ಲೋಮಾ ಕಾಲೇಜುಗಳು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಭಾಗದ ರೈತರ ಸಮಸ್ಯೆಯನ್ನು ಬಗೆ ಹರಿಸುವಲ್ಲಿ ಸುಮಾರು 350 ಎಕರೆಯಷ್ಟು ಜಮೀನಿದ್ದು, ಕೃಷಿ ಸಂಶೋಧನೆ ಹಾಗು ವಿಸ್ತರಣಾ ಚಟುವಟಿಕೆಗಳು ಚಾಲ್ತಿಯಲ್ಲಿದೆ ಎಂದರು. ಕರಾವಳಿಯ ಮೂರು ಜಿಲ್ಲೆಗಳಾದ ದ.ಕ, ಉಡುಪಿ, ಉ.ಕ ಜಿಲ್ಲೆಗಳನ್ನೊಳಗೊಂಡಂತೆ ಯಾವುದೇ ಕೃಷಿ ಮತ್ತು ತೋಟಗಾರಿಕಾ ಮಹಾವಿದ್ಯಾಲಯವಿಲ್ಲ. ಈ ಭಾಗದ ವಿದ್ಯಾರ್ಥಿಗಳು ಹಾಗು ರೈತರ ಮಕ್ಕಳಿಗೆ ಕೃಷಿ ವಿಜ್ಣಾನದಲ್ಲಿ ಪದವಿ ವ್ಯಾಸಂಗ ಮಾಡಿ, ಪದವಿ ಪಡೆಯಲು ಹಿನ್ನಡೆಯಾಗುತ್ತಿದೆ ಎಂದರು. 

ಬ್ರಹ್ಮಾವರದಲ್ಲಿರುವ ಡಿಪ್ಲೋಮಾ ಕಾಲೇಜಿನಲ್ಲಿ ಸುಸಜ್ಜಿತವಾದ ಕಾಲೇಜ್ ಕಟ್ಟಡ, ಪ್ರಯೋಗ ಶಾಲೆ, ವಿದ್ಯಾರ್ಥಿ ನಿಲಯ ಸೌಲಭ್ಯ, ಪೀಠೋಪಕರಣಗಳು, ಇತರೆ ಮೂಲಭೂತ ಸೌಕರ್ಯ, ಬೋಧಕ ಹಾಗು ಬೋಧಕೇತರ ಸಿಬ್ಬಂದಿಗಳು ಲಭ್ಯವಿದ್ದು, ಸರ್ಕಾರಕ್ಕೆ ಅರ್ಥಿಕ ಹೊರೆಯಾಗದಂತೆ ಕೃಷಿ ಮಹಾವಿದ್ಯಾಲಯವನ್ನು ಸ್ಥಾಪಿಸಲು ಅವಕಾಶವಿದೆ ಎಂದರು. ಕುಮ್ಕಿ ಹಕ್ಕು ಮತ್ತು ಗೇರು ಲೀಸ್ ಮಂಜೂರಾತಿ ಪತ್ರವನ್ನು ರೈತರಿಗೆ ನೀಡಬೇಕು. ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ಪ್ರಸ್ತುತ ₹ 3 ಲಕ್ಷದಿಂದ ₹ 5 ಲಕ್ಷಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಅನುಷ್ಠಾನಗೊಂಡಿಲ್ಲ. ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆಗಳಿಗೆ ರಕ್ಷಣೆ ಒದಗಿಸಲು ಸೋಲಾರ್ ಬೇಲಿಯನ್ನು ನಿರ್ಮಾಣ ಮಾಡಲು ಶೇ 90 ರಷ್ಟು ಸಹಾಯಧನ ನೀಡಬೇಕು ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಪ್ರದೀಪ್ ಹೆಬ್ಬಾರ್, ವೈಕುಂಠ ಹೇರಳೆ ಉಪಸ್ಥಿತರಿದ್ದರು. 

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles