ಉಡುಪಿ: ಜಿಲ್ಲೆಯಲ್ಲಿ ಮರಳು ಸಾಗಾಣಿಕೆಯಲ್ಲಿ ಹೆಚ್ಚುವರಿ ಬಾರ (ಓವರ್‌ಲೋಡಿಂಗ್) ಮಾಡುತ್ತಿದ್ದ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ಪೊಲೀಸರು ಶನಿವಾರ ಹಮ್ಮಿಕೊಂಡರು.

ಈ ಕಾರ್ಯಾಚರಣೆಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 13 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.



ವಶಪಡಿಸಿಕೊಂಡ ಎಲ್ಲಾ ವಾಹನಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮೈನ್ಸ್ ಅಂಡ್ ಜಿಯಾಲಜಿ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



