ಉಡುಪಿ: ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಅವರು ಬುಧವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.

ಶ್ರೀಮಠದ ವತಿಯಿಂದ ಅಣ್ಣಾಮಲೈ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ಅವರು ಕನಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶ್ರೀಮಠದ ವತಿಯಿಂದ ಪ್ರಸಾದ ಹಾಗೂ ಶ್ರೀಕೃಷ್ಣ ದೇವರ ಭಾವಚಿತ್ರ ನೀಡಿ ಗೌರವಿಸಲಾಯಿತು.

ಅಣ್ಣಾಮಲೈ ಅವರು ಈ ಹಿಂದೆ ಉಡುಪಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಹಿನ್ನೆಲೆಯಲ್ಲಿ, ಅವರನ್ನು ಭೇಟಿಯಾಗಲು ಹಲವು ಅಭಿಮಾನಿಗಳು ಹಾಗೂ ಹಿತೈಷಿಗಳು ಆಗಮಿಸಿದ್ದರು.

ವಿ ದ ಲೀಡರ್ಸ್ ಮೂವ್ಮೆಂಟ್ ಆರಂಭಿಸಿದ ಬಳಿಕ ಅಣ್ಣಾಮಲೈ ಅವರು ಉಡುಪಿಗೆ ನೀಡುತ್ತಿರುವ ಎರಡನೇ ಭೇಟಿ ಇದಾಗಿದೆ. ಈ ಹಿಂದೆ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೂ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು.


