Sunday, September 20, 2026

spot_img

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ; ಐವರಿಗೆ ಗಾಯ

ಉಡುಪಿ: ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಬಸ್‌ ಹಾಗೂ ಕಾರ್ಕಳದತ್ತ ಬರುತ್ತಿದ್ದ ರಮಾನಾಥ ರೈ ಅವರ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ರಮಾನಾಥ ರೈ ಸೇರಿದಂತೆ ಕಾರಿನಲ್ಲಿದ್ದ ಚಾಲಕ, ಗನ್‌ಮ್ಯಾನ್‌ ಹಾಗೂ ಇಬ್ಬರು ವೈಯಕ್ತಿಕ ಸಹಾಯಕರು ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ರಮಾನಾಥ ರೈ ಅವರ ಪಿಎ ಡೆನ್ಜಿಲ್‌ ಅವರ ಬಲಗಾಲಿಗೆ ಗಂಭೀರ ಗಾಯವಾಗಿರುವುದಾಗಿ ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಹಿನ್ನೆಲೆಯಲ್ಲಿ ರಮಾನಾಥ ರೈ ಸೇರಿದಂತೆ ಗಾಯಾಳುಗಳನ್ನು ಮಂಗಳೂರಿನ ಯೆನಪೋಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles