ಉಡುಪಿ : ಶ್ರೀ ಶೀರೂರು ಮಠದ ಪೀಠಾದಿಪತಿಗಳಾದ ಶ್ರೀ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಬೆಂಗಳೂರಿನಲ್ಲಿ ಚಾತುರ್ಮಾಸ್ಯ ವ್ರತದಲ್ಲಿದ್ದು ಅಲ್ಲಿಗೆ ಭೇಟಿ ನೀಡಿ ಪೂಜ್ಯರ ಆಶೀರ್ವಾದ ಪಡೆಯುವಂತೆ ಹಾಗೂ ಮುಂದಿನ ಪರ್ಯಾಯ ಮಹೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ಮನವಿಯನ್ನು ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇವರಿಗೆ ಇಂದು ನೀಡಲಾಯಿತು.

ಈ ಸಂದರ್ಭದಲ್ಲಿ ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಶ್ರೀ ಮಠದ ಪಾರುಪತ್ಯದಾರರಾದ ಶ್ರೀ ಶ್ರೀಶ ಭಟ್, ಕಾರ್ಯದರ್ಶಿಗಳಾದ ಮೋಹನ್ ಭಟ್ , ಸಂಚಾಲಕರಾದ ರಮೇಶ್ ಕಾಂಚನ್ ಉಪಸ್ಥಿತರಿದ್ದರು.
