ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ನೀಡುವ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿ ಭಾಜನರಾಗಿದ್ದಾರೆ.

ಉಡುಪಿ ನಗರ ಠಾಣೆಯ ಸಹಾಯಕ ಉಪನಿರೀಕ್ಷಕರಾದ ಚಂದ್ರ ಶೆಟ್ಟಿ ಅವರು ತಮ್ಮ ವಿಶಿಷ್ಟ ಸೇವೆಗೆ ಈ ಗೌರವ ಪಡೆದಿದ್ದಾರೆ.ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಂತೋಷ್ ಶೆಟ್ಟಿ (ಎಎಚ್‌ಸಿ–82) ಅವರು ಕರಾವಳಿ ಭದ್ರತೆಯಲ್ಲಿ ತೋರಿದ ಸಾಧನೆಗಾಗಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ.ಇನ್ನೂ ಕಾರ್ಕಳದ ನಕ್ಸಲ್ ನಿಗ್ರಹ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್‌ಎಸ್‌ಐ ಮಂಜುನಾಥ ದೇವರಮನೆ ಅವರು ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೋರಿದ ಶ್ರೇಷ್ಠ ಸೇವೆಗೆ ಈ ಪ್ರಶಸ್ತಿಯನ್ನು ಪಡೆದಿದ್ದಾರೆ.

ಪದಕ ಪುರಸ್ಕೃತರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಐಪಿಎಸ್ ಅವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.



