Thursday, October 23, 2025

spot_img

ಮೊಬೈಲ್‌ ಗೀಳು ಆರೋಪ: ಹೆಂಡತಿಯನ್ನು ಕಡಿದು ಕೊಲೆ…

ಬ್ರಹ್ಮಾವರ : ಯಾವಾಗಲೂ ಮೊಬೈಲ್ ನಲ್ಲಿ ನೋಡುತ್ತಾ ಕುಳಿತುಕೊಳ್ಳುತ್ತಾಳೆ ಎಂದು ಹೆಂಡತಿಯನ್ನು ಗಂಡ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಬ್ರಹ್ಮಾವರದ ಬಳಿ ನಡೆದಿದೆ. ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಈ ಘಟನೆ ನಡೆದಿದ್ದು ಆರೋಪಿ ಗಣೇಶ ಪೂಜಾರಿ(42) ತನ್ನ ಪತ್ನಿ ರೇಖಾ‌(27) ಳನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ. ಹೆಂಡತಿ ರೇಖಾ ಯಾವಾಗಲೂ ಮೊಬೈಲ್ ಹೆಚ್ಚಾಗಿ ನೋಡಿಕೊಂಡಿರುತ್ತಾಳೆ ಎಂದು ಕೋಪಗೊಂಡಿದ್ದ ಗಂಡ ಗಣೇಶ್ ಸಿಟ್ಟಿನಿಂದ ವಿಪರೀತ ಮಧ್ಯ ಸೇವನೆ ಮಾಡಿ ಬಂದು ಹೆಂಡತಿಯ ಬಳಿ ಜಗಳವಾಡಿದ್ದಾನೆ. ಜಗಳ ವಿಕೋಪಕ್ಕೆ ತೆರಳಿ ಆಕೆಯನ್ನ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ.

Untitled design – 1


ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ ಹಾಗೂ ರೇಖಾಳಿಗೆ 8 ವರ್ಷದ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದರು. ರೇಖಾ ಪೆಟ್ರೋಲ್ ಬಂಕ್‌ವೊಂದರಲ್ಲಿ ಕೆಲಸಕ್ಕಿದ್ದು ಗಣೇಶ್ ಮೊಬೈಲ್ ವಿಚಾರದಲ್ಲಿ ಆಗಾಗ್ಗೆ ಗಲಾಟೆ ಮಾಡುತ್ತಿದ್ದ. ಈ ಬಗ್ಗೆ ಈ ಹಿಂದೆ ಶಂಕರನಾರಾಯಣ ಪೊಲೀಸರಿಗೆ ದೂರು ಅರ್ಜಿ ನೀಡಲಾಗಿದ್ದು ಅವರು ಬುದ್ದಿವಾದ ಹೇಳಿ ಮುಚ್ಚಳಿಕೆ ಬರೆಸಿಕೊಂಡಿದ್ದರು. ಆದರೆ ಗಣೇಶ್ ತನ್ನ ಚಾಳಿ ಮುಂದುವರೆಸಿದ್ದು ಗುರುವಾರ ತಡರಾತ್ರಿ ಮನೆಗೆ ಬಂದು ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳ ಮಾಡಿ, ಕತ್ತಿ ಯಿಂದ ಕಡಿದು ಕೊಲೆ ಮಾಡಿದ್ದಾನೆ. ನಿನ್ನೆ ರಾತ್ರಿ 11:30 ಸುಮಾರಿಗೆ ಈ ಘಟನೆ ನಡೆದಿದ್ದು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಪ್ರಕರಣದ ಆರೋಪಿ ಗಣೇಶ್ ಪೂಜಾರಿ ಎನ್ನ ಪೊಲೀಸರು ವಶಕ್ಕೆ ಪಡೆದಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಘಟನಾ ಸ್ಥಳಕ್ಕೆ ಉಡುಪಿ ಎಸ್ ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶಂಕರನಾರಾಯಣ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗಳು ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles