Thursday, April 16, 2026

spot_img

ಯುಡಿಐಡಿ ವೈದ್ಯಕೀಯ ತಪಾಸಣೆ–ನೋಂದಣಿ ಶಿಬಿರಕ್ಕೆ ಚಾಲನೆ

ಉಡುಪಿ : ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಕಲಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆಗಾಗಿ ವೈದ್ಯಕೀಯ ತಪಾಸಣೆ ಹಾಗೂ ಮೌಲ್ಯಮಾಪನ ಶಿಬಿರವನ್ನು ಸೋಮವಾರ ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಆರಂಭಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ಯುಡಿಐಡಿ ಕಾರ್ಡ್ ವಿಕಲಚೇತನರ ಸಬಲೀಕರಣಕ್ಕೆ ಮಹತ್ವದ ಹೆಜ್ಜೆಯಾಗಿದ್ದು, ಅವರಿಗೆ ಸಮಾಜದಲ್ಲಿ ಸಮಾನ ಅವಕಾಶಗಳನ್ನು ಕಲ್ಪಿಸುವ ಜೊತೆಗೆ ಜೀವನವನ್ನು ಸುಲಭಗೊಳಿಸಲು ಸಹಕಾರಿ ಎಂದರು.

ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಶಿಬಿರವನ್ನು ಉದ್ಘಾಟಿಸಿ, ಯುಡಿಐಡಿ ಕಾರ್ಡ್ ದೇಶಾದ್ಯಂತ ವಿಕಲಚೇತನರಿಗೆ ಏಕೈಕ ಹಾಗೂ ಸಾರ್ವತ್ರಿಕ ಗುರುತುಪತ್ರವಾಗಿ ಕಾರ್ಯನಿರ್ವಹಿಸುತ್ತದೆ. ಇದರ ಮೂಲಕ ಸರ್ಕಾರದ ವಿವಿಧ ಯೋಜನೆಗಳು, ಸೌಲಭ್ಯಗಳು ಹಾಗೂ ರಿಯಾಯಿತಿಗಳನ್ನು ಸುಲಭವಾಗಿ ಪಡೆಯಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರೇಮಾನಂದ , ಆಡಳಿತ ವೈದ್ಯಾಧಿಕಾರಿ ಡಾ. ಚಂದ್ರ ಮರಕಲ, ಜಯಕರ ಶೆಟ್ಟಿ, ರೆಡ್ ಕ್ರಾಸ್ ಸಂಸ್ಥೆ ಶಿವರಾಮ ಶೆಟ್ಟಿ, ವೈದ್ಯಾಧಿಕಾರಿ ನಾಗೇಶ್, ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಅಧಿಕಾರಿ ರತ್ನ ಸುವರ್ಣ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ  ಡಾ. ಗಣನಾಥ ಶೆಟ್ಟಿ ಎಕ್ಕಾರು  ಸೇರಿದಂತೆ ವೈದ್ಯರು, ಸಿಬ್ಬಂದಿ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು. ಶಿಬಿರದಲ್ಲಿ ವಿಕಲಚೇತನರ ಮೌಲ್ಯಮಾಪನ ನಡೆಸಿ ಯುಡಿಐಡಿ ಕಾರ್ಡ್ ಪಡೆಯಲು ಅಗತ್ಯ ನೋಂದಣಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles