Sunday, July 6, 2025

spot_img

ರಾಜ್ಯ ಸರ್ಕಾರ “ಪೊಲೀಸ್ ರಾಜ್” ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ: ಸುನೀಲ್ ಕುಮಾರ್

ಬೆಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ “ಪೊಲೀಸ್ ರಾಜ್” ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಟೀಕಿಸಿದ್ದಾರೆ. ದ್ವೇಷ ಭಾಷಣ ನಿಯಂತ್ರಣ ನೆಪದಲ್ಲಿ ಕಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡವರ ಮೇಲೆ ಅನಗತ್ಯವಾಗಿ ಪ್ರಕರಣ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ. ಖುದ್ದು ರಾಜ್ಯ ಸರ್ಕಾರವೇ ” ದ್ವೇಷ ಭಾಷೆ” ಯ ಪ್ರಚಾರ ನಡೆಸುತ್ತಿದ್ದು, ನಿರ್ದಾಕ್ಷಿಣ್ಯ ಕ್ರಮವನ್ನು ಹಿಂದು ಸಂಘಟನೆಗೆ ಸೀಮಿತಗೊಳಿಸುತ್ತಿದೆ. ಸರ್ಕಾರದ ಏಕಪಕ್ಷೀಯ ಕ್ರಮ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಷ್ಟಕ್ಕೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಹಾಗೂ ಹಿಂಸೆಗೆ ಪ್ರೇರಣೆ ನೀಡಿದವರು ಯಾರು ? ತಲವಾರು, ಕತ್ತಿ ಝಳಪಿಸಿ ಹತ್ಯೆಯ ಮಾತುಗಳನ್ನು ಆಡಿದವರನ್ನು ಪೊಲೀಸರು ಏಕೆ ಮುಟ್ಟುತ್ತಿಲ್ಲ ? ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸಿದವರಿಗೆ, ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ರವಾನಿಸಿದವರ ಮೇಲೆ ಮಾತ್ರ ನಿಮ್ಮ ಕಾನೂನು‌ ಕ್ರಮವೇ ? ಎಂದು ಪ್ರಶ್ನಿಸಿದ್ದಾರೆ. ಪೊಲೀಸರ ಈ ಕ್ರಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ಪ್ರಕ್ಷುಬ್ಧತೆ ಮೂಡಿಸುವುದಕ್ಕೆ ಕಾರಣವಾಗುತ್ತದೆ. ಎಫ್ ಐಆರ್ ಅಸ್ತ್ರ ಬಳಸಿ ಶಾಂತಿ ಸ್ಥಾಪನೆಯ ಭ್ರಮ ಬೇಡ. ಸಮಾಜದ ಎಲ್ಲ ವರ್ಗದಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮೊದಲು ಮಾಡಿ ಎಂದು ಸಲಹೆ ನೀಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles