Monday, August 25, 2025

spot_img

ರಾಷ್ಟ್ರೀಯ ಸೇವಾ ಯೋಜನೆಯ ಅಭಿವಿನ್ಯಾಸ ಕಾರ್ಯಕ್ರಮ ಹಾಗೂ ಸದ್ಭಾವನಾ ದಿನಾಚರಣೆ

ಕೋಟ : ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ- ಪಡುಕರೆ ಇಲ್ಲಿ ಐ.ಕ್ಯೂ.ಎ.ಸಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಅಭಿವಿನ್ಯಾಸ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಡಾ.ಮಹೇಶ್‌ ಕುಮಾರ್‌  ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ,ರಾಷ್ಟ್ರೀಯ ಸೇವಾ ಯೋಜನೆಯು ಗಾಂಧೀಜಿಯವರ ಸ್ವರಾಜ್ಯದ ಕನಸಿನ ಕೂಸಾಗಿದೆ. ದೇಶವು ಅಭಿವೃದ್ಧಿಯತ್ತ ಸಾಗಬೇಕಾದರೆ ಯುವಜನಾಂಗ ಅದರಲ್ಲೂ ವಿದ್ಯಾರ್ಥಿಗಳು ಹೆಚ್ಚಾಗಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಳ್ಳಬೇಕು ಎಂಬುದಾಗಿ ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡರೆ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವುದರ ಜೊತೆಗೆ ಉತ್ತಮ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಇದೊಂದು ವೇದಿಕೆಯಾಗಿದೆ ಎಂದರು.

 ಇದೇ ಸಂದರ್ಭದಲ್ಲಿ ಸದ್ಭಾವನಾ ದಿನದ ಅಂಗವಾಗಿ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಜಾತಿ,ಮತ,ಧರ್ಮ ಮತ್ತು ಭಾಷೆಯ ಭೇದವಿಲ್ಲದೇ ನಾವೆಲ್ಲರು ಭಾರತೀಯರು ಎಂಬುದನ್ನು ತಿಳಿಸುವುದರ ಜೊತೆಗೆ, ಇಲ್ಲಿ ಎಲ್ಲರು ಭಾವೈಕ್ಯತೆ ಮತ್ತು ಸೌಹಾರ್ದಯುತವಾಗಿ ಜೀವಿಸಬೇಕು ಎಂಬ ತತ್ವವನ್ನು ಪ್ರತಿಪಾದಿಸಿದರು. ಪ್ರಾಂಶುಪಾಲರಾದ ಡಾ.ರಾಜೇಂದ್ರ ಎಸ್‌ ನಾಯಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿಯಾದ ಕು.ತ್ರಿಶಾ ದ್ವಿತೀಯ ಬಿ.ಸಿ.ಎ ಅವರು ನಿರೂಪಿಸಿದರು, ಎನ್‌,ಎಸ್‌,ಎಸ್‌ ಯೋಜನಾಧಿಕಾರಿಯಾದ ಡಾ.ಪ್ರಕಾಶ್‌‌ ಕೆ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಪ್ರೊ.ರಮೇಶ್‌ ಆಚಾರ್‌ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ, ಡಾ.ಸುಬ್ರಮಣ್ಯ ಎ. ಐ.ಕ್ಯೂ.ಎ.ಸಿ ಸಂಚಾಲಕರು ಹಾಗೂ ಎನ್.ಎಸ್.ಎಸ್‌ ಘಟಕದ ವಿದ್ಯಾರ್ಥಿ ನಾಯಕರಾದ ಕು.ಕೀರ್ತನಾ ಬಿ.ಎಮ್‌ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles