Wednesday, March 4, 2026

spot_img

ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ

ಉಡುಪಿ : ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯು.ಎ.ಸಿ. ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಸಪ್ತಾಹದ ಅವಧಿಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ, ಪುಸ್ತಕ ಪ್ರದರ್ಶನ, ಜ್ಞಾಪಕಶಕ್ತಿ ಸ್ಪರ್ಧೆ, ಪುಸ್ತಕ ವಿಮರ್ಶೆ, ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಮಾರೋಪ ಕಾರ್ಯಕ್ರಮದಲ್ಲಿ ಓದುವ ಹವ್ಯಾಸ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅಧ್ಯಾಪಕ ಭೂಪಣ ಪ್ರಶಸ್ತಿ 2025ರ ವಿಜೇತೆ, ಕಾಪು ಸರ್ಕಾರಿ ಕಾಲೇಜಿನ ಗ್ರಂಥಪಾಲಕಿ ಶ್ರೀಮತಿ ಯಶೋಧ ಅವರಿಗೆ ಕಾಲೇಜಿನ ವತಿಯಿಂದ ಗೌರವ ಸನ್ಮಾನ ನೀಡಲಾಯಿತು. ಸನ್ಮಾನಿತರು ವಿದ್ಯಾರ್ಥಿಗಳಿಗೆ ಡಿಜಿಟಲ್ ಗ್ರಂಥಾಲಯದ ಬಳಕೆ, ಓದುವ ಹವ್ಯಾಸ ಹಾಗೂ ಪಠನ ಸಂಸ್ಕೃತಿ ಕುರಿತು ಮಾರ್ಗದರ್ಶನ ನೀಡಿದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜೇಂದ್ರ ಎಸ್. ನಾಯಕ ಅವರು, ವಿದ್ಯಾರ್ಥಿಗಳ ಜೀವನದಲ್ಲಿ ಗ್ರಂಥಾಲಯದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಪ್ರೊ. ರಮೇಶ್ ಆಚಾರ್ (ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ), ಪ್ರೊ. ಸುಬ್ರಮಣ್ಯ ಎ. (ಐ.ಕ್ಯೂ.ಎ.ಸಿ ಸಂಚಾಲಕರು) ಹಾಗೂ ಗ್ರಂಥಾಲಯ ಪ್ರತಿನಿಧಿ ಕು. ಪ್ರತೀಕ್ಷಾ ಉಪಸ್ಥಿತರಿದ್ದರು. ಗ್ರಂಥಪಾಲಕಿ ಶ್ರೀಮತಿ ರಾಧಕೆ ಅವರು ಪ್ರಾಸ್ತಾವಿಕ ನುಡಿಗಳ ಮೂಲಕ ಕಾರ್ಯಕ್ರಮದ ಉದ್ಘಾಟನೆ ಮಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಕು. ರಕ್ಷಾ ಹಾಗೂ ದುರ್ಗಾಪ್ರಸಾದ್ ಪುಸ್ತಕ ವಿಮರ್ಶೆ ಮಂಡಿಸಿದರು. ಕು. ತ್ರಿಷಾ ಕಾರ್ಯಕ್ರಮವನ್ನು ನಿರೂಪಿಸಿದರು. ಕು. ಶ್ರದ್ದಾ ವಂದನಾಪ್ರಶಸ್ತಿಯನ್ನು ಸಲ್ಲಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles