Sunday, August 2, 2026

spot_img

ವಿದ್ಯಾಪೋಷಕ್ ಶೈಕ್ಷಣಿಕ ಸಮಾವೇಶ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವೃತ್ತಿ ಹಾಗೂ ಜೀವನ ಮೌಲ್ಯಗಳ ಮಾರ್ಗದರ್ಶನ

ಉಡುಪಿ : ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಯೋಜನೆಯಡಿ ವಿವಿಧ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಫಲಾನುಭವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಒಂದು ದಿನದ ಶೈಕ್ಷಣಿಕ ಮಾರ್ಗದರ್ಶಿ ಸಮಾವೇಶ ಭಾನುವಾರ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಯು.ಸಿ. ನಿರಂಜನ್ ಅವರ ನೇತೃತ್ವದಲ್ಲಿ ಡಾ. ಪ್ರಶಾಂತ ಹೆಬ್ಬಾರ್, ಶ್ರೀಪಾದ ಹೆಬ್ಬಾರ್, ಕಿರಣ್ ನಾಯ್ಕ್, ಡಾ. ಮಂಜುಳ ಸಿ. ಬೆಳವಾಗಿ, ದಿವ್ಯಶ್ರೀ ಬಿ. ಹಾಗೂ ಯೋಗೀಶ್‌ಚಂದ್ರಾಧರ್, ಪ್ರತಿಮಾ ಪಾಂಗಣ್ಣಾಯ ಮತ್ತು ರಮ್ಯಾ ದೇಶಪಾಂಡೆ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಕಲಿಕೆ ವಿಧಾನಗಳು, ವೃತ್ತಿ ಜೀವನದ ಸವಾಲುಗಳು, ವ್ಯಕ್ತಿತ್ವ ವಿಕಸನ ಹಾಗೂ ಜೀವನ ಮೌಲ್ಯಗಳ ಕುರಿತು ಉಪಯುಕ್ತ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ವ್ಯಕ್ತಿತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವ ಅಗತ್ಯವನ್ನು ಒತ್ತಿಹೇಳಿದರು. ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ವಿ.ಜಿ. ಶೆಟ್ಟಿ, ಯು.ಎಸ್. ರಾಜಗೋಪಾಲ ಆಚಾರ್ಯ ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ನಾರಾಯಣ ಎಂ. ಹೆಗಡೆ ಸಹಕರಿಸಿದರು. ಸಂಸ್ಥೆಯ ಸದಸ್ಯರಾದ ವಿಜಯಕುಮಾರ್ ಮುದ್ರಾಡಿ, ಅನಂತರಾಜ ಉಪಾಧ್ಯ, ಅಶೋಕ ಎಂ., ಎನ್. ರಾಮ ಭಟ್, ಪ್ರಭಾಕರ ಭಂಡಿ ಹಾಗೂ ವಸಂತ ಆರ್. ಮಂಜುನಾಥ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮಾವೇಶದಲ್ಲಿ ವಿದ್ಯಾಪೋಷಕ್ ಯೋಜನೆಯ 227 ವಿದ್ಯಾರ್ಥಿಗಳು ಪಾಲ್ಗೊಂಡು ಪ್ರಯೋಜನ ಪಡೆದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಹಾಯಧನ ನವೀಕರಣ ಅರ್ಜಿ ನಮೂನೆಗಳನ್ನು ವಿತರಿಸಲಾಯಿತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles