Sunday, July 27, 2025

spot_img

ವಿದ್ಯಾರ್ಥಿ ಜೀವನವನ್ನು ಸಾರ್ಥಕ ಮಾಡಿಕೊಂಡವನೇ ಸಾಧಕ : ಎ.ಎಸ್.ಪಿ ಸುಧಾಕರ್ ನಾಯಕ್

ಉಡುಪಿ : ವಿದ್ಯಾರ್ಥಿ ಜೀವನದಲ್ಲಿಯೇ ಶಿಸ್ತು, ಶ್ರದ್ಧೆ ಮತ್ತು ಚೆನ್ನಾಗಿ ಓದುವ ಹವ್ಯಾಸಗಳನ್ನು ಬೆಳೆಸಿಕೊಂಡರೆ ಭವಿಷ್ಯದ ಜೀವನದಲ್ಲಿ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ. ವಿದ್ಯಾರ್ತಿ ಜೀವನವನ್ನು ಸಾರ್ಥಕ ಮಾಡಿಕೊಂಡವರೇ ನಿಜವಾದ ಸಾಧಕರು ಆಗುತ್ತಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್ ಹೇಳಿದರು.
ಅವರು ಇಂದು ನಗರದ ಅಜ್ಜರಕಾಡು ಸರಕಾರಿ ಸಂಯುಕ್ತ ಪ್ರೌಡಶಾಲೆಯಲ್ಲಿ ಉಡುಪಿ ಪೊಲೀಸ್ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಡ್ರಾಯಿಂಗ್ ಕಿಟ್ ಹಾಗೂ ನೀರಿನ ಬಾಟೆಲ್‌ಗಳನ್ನು ವಿತರಿಸಿ ಮಾತನಾಡುತ್ತಿದ್ದರು.


ವಿದ್ಯಾರ್ಥಿಗಳು ಪರಿಶ್ರಮದಿಂದ ವಿದ್ಯಾಭ್ಯಾಸವನ್ನು ಮಾಡುವುದರೊಂದಿಗೆ ಶಿಕ್ಷಣವಂತರಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸಿ, ತಮ್ಮ ಪೋಷಕರಿಗೆ, ಗುರುಹಿರಿಯರಿಗೆ ಒಳ್ಳೆಯ ಹೆಸರನ್ನು ತಂದುಕೊಡುವ ಜೊತೆಗೆ ಸಮಾಜದಲ್ಲಿ ಉತ್ತಮ ಸೇವೆಯನ್ನು ಮಾಡುವುದರೊಂದಿಗೆ ಜೀವನದಲ್ಲಿ ಸಾರ್ಥಕತೆಯನ್ನು ಕಾಣಬೇಕು ಎಂದರು.
ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ಮಾತನಾಡಿ, ಶಿಕ್ಷಣಕ್ಕಾಗಿ ವಿವಿಧೆಡೆಯಿಂದ ಆಗಮಿಸಿದ ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ಶಿಕ್ಷಣದ ಹಾದಿ ಹಿಡಿಯುತ್ತಾರೆ. ಗುರಿ ಸಾಧಿಸುವವರೆಗೆ ಸತತ ಅಧ್ಯಯನ ಮಾಡಬೇಕು. ಬದುಕುವ ಕಲೆಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ಕಲಿಕೆಯ ಜೊತೆಗೆ ಉಳಿಕೆಯ ಕಲೆಯನ್ನು ಅಭ್ಯಾಸ ಮಾಡಿಕೊಂಡಾಗ ಬದುಕು ಉತ್ತಮವಾಗಿ ರೂಪುಗೊಳ್ಳುತ್ತದೆ ಎಂದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಡ್ರಾಯಿಂಗ್ ಕಿಟ್ ಹಾಗೂ ನೀರಿನ ಬಾಟೆಲ್‌ಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಪ್ರಭು ಡಿ.ಟಿ, ನಗರ ಪೊಲೀಸ್ ನಿರೀಕ್ಷಕ ಮಂಜುನಾಥ್ ಬಡಿಗೇರ, ವಿವಿಧ ಠಾಣೆಯ ಪೊಲೀಸ್ ಉಪನಿರೀಕ್ಷಕರುಗಳು, ಶಾಲೆಯ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಉಷಾಕಿರಣ ಸ್ವಾಗತಿಸಿ, ಶಿಕ್ಷಕ ರವೀಂದ್ರ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles