ಉಡುಪಿ : ಉಡುಪಿಯ ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನ ಸಂಸ್ಥಾಪನ ದಿನಾಚಾರಣೆ ವಿಜೃಂಭಣೆಯಿಂದ ನಡೆಯಿತು. ಮಾನವಿಕ ವಿಭಾಗದ ಮುಖ್ಯಸ್ಥರಾದ ರೋಹಿತ್ ಎಸ್. ಅಮೀನ್ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರೀಯ ಸೇವಾ ಯೋಜನೆ ಯುವಜನರಲ್ಲಿ ಶಿಸ್ತು, ಸಮರ್ಪಣೆ ಹಾಗೂ ಸಮಾಜಸೇವೆಗಿನ ಬದ್ಧತೆಯನ್ನು ಬೆಳೆಸುವ ವೇದಿಕೆಯಾಗಿದೆ ಎಂದರು.

ವಿದ್ಯಾರ್ಥಿಗಳ ಕ್ಷೇಮಪಾಲನ ವಿಭಾಗದ ಮುಖ್ಯಸ್ಥೆ ಡಾ. ಪ್ರೀತಿ ಹರೀಶ್ ರಾಜ್ ಅವರು ಅಧ್ಯಕ್ಷತೆ ವಹಿಸಿ, ಎನ್ ಎಸ್ ಎಸ್ ಮೂಲಕ ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡು ಜವಾಬ್ದಾರಿಯುತ ನಾಗರಿಕರಾಗುವ ಅಗತ್ಯತೆಯನ್ನು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಪ್ರಸ್ತಾಪಿಸಿದರು.

ಎನ್ ಎಸ್ ಎಸ್ ಸಂಯೋಜನ ಅಧಿಕಾರಿ ಡಾ. ನವೀನ್ ಚಂದ್ರ ಸಿ.ಬಿ., ಹಾಗೂ ಅಮೋಘ ಗಟ್ಕರ್, ಕಾಲೇಜಿನ ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು. ಏನ್ ಎಸ್ ಎಸ್ ಕಾರ್ಯದರ್ಶಿಗಳಾದ ಸಮೀರ್ ಸರ್ವರನ್ನು ಸ್ವಾಗತಿಸಿದರು, ಅಂಕಿತ ಧನ್ಯವಾದವಿತ್ತರು, ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಸಂದೇಶ್ ಮತ್ತು ಏನ್ ಎಸ್ ಎಸ್ ಸ್ವಯಂಸೇವಕರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡರು.



