ಉಡುಪಿ: ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕ 1 ಮತ್ತು 2ರ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು. ಸಮಾನತೆ, ನ್ಯಾಯ ಮತ್ತು ಮಾನವ ಹಕ್ಕುಗಳಿಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ಮಹಾನ್ ನಾಯಕ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸ್ಮರಿಸುವ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಆರಂಭದಲ್ಲಿ ಪುಷ್ಪಾರ್ಚನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾನವಿಕ ವಿಭಾಗದ ಮುಖ್ಯಸ್ಥರಾದ ಪ್ರೊ. ರೋಹಿತ್ ಎಸ್. ಅಮೀನ್ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಅಂಬೇಡ್ಕರ್ ಅವರ ಚಿಂತನೆಗಳು ಹಾಗೂ ಸಾಮಾಜಿಕ ನ್ಯಾಯದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮಕ್ಕೆ ಉಪ ಪ್ರಾಂಶುಪಾಲರಾದ ಡಾ. ಪ್ರೀತ್ ಹರೀಶ್ ರಾಜ್ ಅವರು ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಾನೂನು ವಿಭಾಗದ ಮುಖ್ಯಸ್ಥರಾದ ಡಾ. ಜಯಮೇಲ್, ಎನ್‌ಎಸ್‌ಎಸ್ ಸಂಯೋಜನಾಧಿಕಾರಿಗಳಾದ ಡಾ. ನವೀನ್ ಚಂದ್ರ ಸಿ.ಬಿ ಹಾಗೂ ಅಮೇಘ ಸರ್, ಎನ್‌ಎಸ್‌ಎಸ್ ಕಾರ್ಯದರ್ಶಿಗಳಾದ ಸಮೀರ್, ಅಂಕಿತ ಮತ್ತು ರಕ್ಷಿತಾ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.



