Friday, September 25, 2026

spot_img

ಶಾರ್ಜಾದಲ್ಲಿ ಹತ್ಯೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಕ್ರಿಯೆ

ಉಡುಪಿ : ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಯಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ ನಿವಾಸಿ ಅಲ್ವಿನ್ ಪ್ರಕಾಶ್ ಕುಂದರ್ (50) ಅವರ ಪಾರ್ಥಿವ ಶರೀರ ಶುಕ್ರವಾರ ಸ್ವಗ್ರಾಮಕ್ಕೆ ತಲುಪಿತು. ಶಾರ್ಜಾದಿಂದ ವಿಮಾನದ ಮೂಲಕ ಸೆ.25ರಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾದ ಪಾರ್ಥಿವ ಶರೀರವನ್ನು ಬಳಿಕ ಕುಂದಾಪುರದ ಮನೆಗೆ ಕೊಂಡೊಯ್ಯಲಾಯಿತು.

ಮನೆಯಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಬೆಳಗ್ಗೆ 10.30ರ ಸುಮಾರಿಗೆ ಶಾಸ್ತ್ರೀ ವೃತ್ತದ ಬಳಿಯ ಸಿ.ಎಸ್.ಐ. ಕೃಪಾ ಚರ್ಚ್‌ನ ಸಮಾಧಿ ಸ್ಥಳದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಲ್ವಿನ್ ಅವರ ತಂದೆ-ತಾಯಿ ಸಮಾಧಿಯ ಪಕ್ಕದಲ್ಲೇ ಪಾರ್ಥಿವ ಶರೀರವನ್ನು ದಫನ ಮಾಡಲಾಯಿತು.

ಸಿ.ಎಸ್.ಐ. ಕೃಪಾ ಚರ್ಚ್ ಧರ್ಮಗುರು ರೆ. ಫಾ. ಇಮಾನ್ಯುವಲ್ ಜಯಕರ್ ಅವರ ನೇತೃತ್ವದಲ್ಲಿ ಏರಿಯಾ ಅಧ್ಯಕ್ಷ ರೆ. ಕಿಶೋರ್ ಕುಮಾರ್, ರೆ. ಎಡ್ವಿನ್ ಜೋಸೆಫ್, ಸಿಎಎಸ್‌ಐ ಡಯಾಸಿಸ್ ಕೋಶಾಧಿಕಾರಿ ಐವಾನ್ ಸೋನ್ಸ್, ರೆ. ಪ್ರವೀಣ್ ಮಾಬೆನ್, ಬಸ್ರೂರು ಎಲಿಜಬೆತ್ ಚರ್ಚ್‌ನ ರೆ. ಫಾ. ರವಿ ಶಶಿಕಲಾ ಹಾಗೂ ರೆ. ಸ್ಟೀವನ್ ಸರ್ವೋತ್ತಮ್ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.

ಅಂತಿಮ ದರ್ಶನ ಹಾಗೂ ಗೌರವ ಸಲ್ಲಿಸಲು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತಾ, ಪುರಸಭೆ ಮಾಜಿ ಸದಸ್ಯರಾದ ಪ್ರಭಾಕರ್, ರಾಜೇಶ್ ಕಾವೇರಿ, ರತ್ನಾಕರ ಸೇರಿದಂತೆ ದಿನೇಶ್ ಹೆಗ್ಡೆ ಮೊಳಹಳ್ಳಿ, ವಿಕಾಸ ಹೆಗ್ಡೆ, ವಿಜಯ್ ಎಸ್. ಪೂಜಾರಿ, ವಿ. ನರಸಿಂಹ ಮೊದಲಾದವರು ಉಪಸ್ಥಿತರಿದ್ದರು.

ಮೃತದೇಹವನ್ನು ಕಾನೂನುಬದ್ಧವಾಗಿ ಸ್ವೀಕರಿಸುವ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಎಂ.ಎ. ಗಫೂರ್, ಪ್ರಶಾಂತ್, ಆಕಾಶ್, ಪ್ರಮೀಳಾ ಜತ್ತನ್, ಉದಯ್ ಸೇರಿದಂತೆ ಹಲವರು ಶುಕ್ರವಾರ ಮುಂಜಾನೆಯೇ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles