ಉಡುಪಿ : ತೋಟದಲ್ಲಿ ಬೆಳೆದಿದ್ದ ಸರಿಸುಮಾರು 4 ಲಕ್ಷ ಮೌಲ್ಯದ ಶ್ರೀಗಂಧದ ಮರವನ್ನ ಕಳ್ಳತನ ಮಾಡಿ ಪರಾರಿಯಾಗಿದ್ದ ಮೂವರು ಮರಗಳ್ಳರನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಮೂಡು ಬೆಳ್ಳೆ ನಿವಾಸಿ ಗಣೇಶ(44), ಮರ್ಣೆ ನಿವಾಸಿ ಸಂತೋಷ್ (35) ಮತ್ತು ಮೊಯ್ದಿನ್ (60) ಬಂದಿತ ಆರೋಪಿಗಳು. ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ಎಂಬುವವರ ತೋಟದಲ್ಲಿ ಬೆಳೆಸಿದ್ದ ನಾಲ್ಕು ಲಕ್ಷ ಮೌಲ್ಯದ ಒಟ್ಟು ಒಂಬತ್ತು ಶ್ರೀಗಂಧದ ಮರಗಳನ್ನ ಆರೋಪಿಗಳು ಕಳವು ಮಾಡಿದ್ದರು. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಆರೋಪಿಗಳನ್ನು ವಿಚಾರಣೆ ನಡೆಸಿದ ಪೊಲೀಸ್ ರು ಕಳುವು ಮಾಡಿದ ಶ್ರೀಗಂಧದ ಮರದ ತುಂಡುಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಹೆಚ್ಚಿನ ವಿಚಾರಣೆ ನಡೆಸಿದಾಗ ಆರೋಪಿಗಳು ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಕೂಡ ಶ್ರೀಗಂಧದ ಮರಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ


