Monday, July 6, 2026

spot_img

ಸಂಜೀವಿನಿ ಒಕ್ಕೂಟದಲ್ಲಿ ರೂ23 ಲಕ್ಷ ವಂಚನೆ; ದಂಪತಿ ಬಂಧನ

ಉಡುಪಿ : ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಡೂರು ಗ್ರಾಮದ ಪದ್ಮ ಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಲ್ಲಿ ರೂ23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಮಹಿಳೆ ಹಾಗೂ ಆಕೆಯ ಪತಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ್ತಿಯಾಗಿದ್ದ ಸುಗಂಧಿ ಹಾಗೂ ಆಕೆಯ ಪತಿ ಸಂತೋಷ್ ಎಂದು ಗುರುತಿಸಲಾಗಿದೆ.

 ಸುಗಂಧಿ ಅವರು 2023ರಿಂದ 2025ರ ಅವಧಿಯಲ್ಲಿ ಒಕ್ಕೂಟದಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸದಸ್ಯರು ಮರುಪಾವತಿಸಿದ ಸಾಲದ ಹಣವನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿದ್ದರೂ, ಅದನ್ನು ಒಕ್ಕೂಟದ ಬ್ಯಾಂಕ್ ಖಾತೆಗೆ ಜಮೆ ಮಾಡದೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದಲ್ಲದೆ, ವಿವಿಧ ಸಂಘಗಳ ಹೆಸರಿನಲ್ಲಿ ಒಕ್ಕೂಟದ ಚೆಕ್‌ಗಳಿಗೆ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯ ನಕಲಿ ಸಹಿಗಳನ್ನು ಮಾಡಿ ಬ್ಯಾಂಕ್‌ನಿಂದ ಹಣ ಪಡೆದಿರುವುದು, ಲೆಕ್ಕಪರಿಶೋಧನೆಯ ವೇಳೆ ಅನುಮಾನ ಬಾರದಂತೆ ಪ್ರತ್ಯೇಕ ಸಾಲದ ಖಾತೆ ಪುಸ್ತಕಗಳನ್ನು ನಿರ್ವಹಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಮೂಲಕ ಒಕ್ಕೂಟಕ್ಕೆ ಸುಮಾರು ರೂ 23 ಲಕ್ಷ ನಷ್ಟ ಉಂಟುಮಾಡಿ ನಂಬಿಕೆ ದ್ರೋಹ ಹಾಗೂ ವಂಚನೆ ಎಸಗಿರುವ ಆರೋಪ ಕೇಳಿಬಂದಿದೆ.

ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದ್ದು, ಜುಲೈ 6ರಂದು ಸುಗಂಧಿ ಮತ್ತು ಸಂತೋಷ್ ಅವರನ್ನು ವಶಕ್ಕೆ ಪಡೆದು ಬಂಧಿಸಿ ವಿಚಾರಣೆ ನಡೆಸಿದೆ. ಪ್ರಾಥಮಿಕ ತನಿಖೆಯಲ್ಲಿ ಸುಗಂಧಿ ಮತ್ತು ಆಕೆಯ ಪತಿ ಸೇರಿ ವಿವಿಧ ಸದಸ್ಯರ ಹೆಸರಿನಲ್ಲಿ ನಕಲಿ ಸಹಿ ಹಾಗೂ ದಾಖಲೆಗಳನ್ನು ಸೃಷ್ಟಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles