ಉಡುಪಿ : ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ ಜಾರಕಿಹೊಳಿ ಅವರು
ಫೆಬ್ರವರಿ 16 ಮತ್ತು 17 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ. 16 ರಂದು ಸಂಜೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.

ಫೆ. 17 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ, ಮಧ್ಯಾಹ್ನ 1 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ.