Thursday, March 5, 2026

spot_img

ಸಲಹಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರ ನೇಮಕ : ಅರ್ಜಿ ಆಹ್ವಾನ

ಉಡುಪಿ : ರಾಜ್ಯದಲ್ಲಿರುವ ಅಲೆಮಾರಿ ಜನಾಂಗದವರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗದ ಶಿಫಾರಸ್ಸಿನನ್ವಯ ರಾಜ್ಯದ ಅಲೆಮಾರಿ ಜನಾಂಗದವರಿಗೆ ಮೀಸಲಾತಿ ಸೌಲಭ್ಯ ಹಾಗೂ ಕೇಂದ್ರ ಸರ್ಕಾರದ ಅರ್ಥಿಕ ನೆರವಿನೊಂದಿಗೆ ಅಲೆಮಾರಿ ಜನಾಂಗದ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸುವಲ್ಲಿ ಅಲೆಮಾರಿ ಜನಾಂಗದವರ ಸಲಹಾ ಸಮಿತಿಯನ್ನು ರಚಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಪ್ರಗತಿ ಪರಿಶೀಲನೆ ಮಾಡಿ ಸರ್ಕಾರಕ್ಕೆ ಸೂಕ್ತ ಸಲಹೆ ನೀಡಲು ಸಲಹಾ ಸಮಿತಿಯನ್ನು ಪುನರ್ ರಚಿಸಿ ಜಿಲ್ಲಾ ಮಟ್ಟದ ಮತ್ತು ತಾಲೂಕು ಅಲೆಮಾರಿ ಜನಾಂಗದ ಅಭಿವೃದ್ಧಿ ಸಂಸ್ಥೆಯ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕಿದ್ದು, ಅದರಂತೆ ಜಿಲ್ಲೆಯ ಅಲೆಮಾರಿ/ ಅರೆಅಲೆಮಾರಿ ಜನಾಂಗದ ಆಸಕ್ತ ಅಭ್ಯರ್ಥಿಗಳು ತಮ್ಮ ಜಾತಿ ಪ್ರಮಾಣ ಪತ್ರದೊಂದಿಗೆ ಮನವಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ 304, ಎರಡನೇ ಮಹಡಿ, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ಮೇ 10 ರ ಒಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 0820-2574881, 2573881 ಅಥವಾ ಇ-ಮೇಲ್ dobcmudupi@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles