Monday, March 2, 2026

spot_img

ಸಿದ್ದಾಪುರ ಏತ ನೀರಾವರಿ ಯೋಜನೆ: ತಜ್ಞರ ವರದಿ ತನಕ ಕಾಮಗಾರಿ ಸ್ಥಗಿತ

ಉಡುಪಿ: ಸಿದ್ದಾಪುರ ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ತಜ್ಞರ ಸಮಿತಿಯ ಅಭಿಪ್ರಾಯ ಪಡೆಯಲು ಸೂಚನೆ ನೀಡಿದ್ದು, ಸಮಿತಿ ವರದಿ ಸಲ್ಲಿಸುವ ತನಕ ಕಾಮಗಾರಿಯನ್ನು ಸ್ಥಗಿತಗೊಳಿಸಲು ಕರ್ನಾಟಕ ನೀರಾವರಿ ನಿಗಮಕ್ಕೆ ಆದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ತಜ್ಞರ ಸಮಿತಿಯ ವರದಿಯ ಆಧಾರದ ಮೇಲೆ ಯೋಜನೆಯ ಸಾಧಕ-ಬಾಧಕಗಳನ್ನು ಪರಿಶೀಲಿಸಿ, ಯಾವುದೇ ರೈತರಿಗೆ ಅನ್ಯಾಯವಾಗದ ರೀತಿಯಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles