ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ನಡೂರು ಬಳಿ ಇರುವ ಸೀತಾ ನದಿಯ ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಯುವಕನನ್ನು ದೇವರಾಜ (35) ಎಂದು ಗುರುತಿಸಲಾಗಿದೆ.

ನಡೂರು ಗ್ರಾಮದ ಶಿವರಾಮ ರಾಯ (57) ಅವರ ತಂಗಿ ಪದ್ಮಾವತಿ ಅವರ ಪುತ್ರ ದೇವರಾಜ ಅವರು ಜ.13ರಂದು ಸಂಜೆ ಸುಮಾರು 4 ಗಂಟೆಗೆ ಸೀತಾ ನದಿಯ ಡ್ಯಾಂ ಬಳಿ ಸ್ನಾನಕ್ಕೆ ಹೋಗಿದ್ದರು. ಈ ವೇಳೆ ನೀರಿನಲ್ಲಿ ಸ್ನಾನ ಮಾಡುತ್ತಿರುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



