Saturday, March 14, 2026

spot_img

ಸ್ಕೂಟರ್ ಅಪಘಾತ: 50 ವರ್ಷದ ಮಹಿಳೆ ಸಾವು, ಪುತ್ರ ಗಂಭೀರ ಗಾಯ

ಉಡುಪಿ: ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಪರಿಣಾಮ 50 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ನಿಟ್ಟೂರು ಸಮೀಪ ಶುಕ್ರವಾರ ಸಂಜೆ ನಡೆದಿದೆ. ಘಟನೆಯಲ್ಲಿ ಮಹಿಳೆಯ ಪುತ್ರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಕಟಪಾಡಿ ಮೂಲದ ಹೆಲೆನ್ ಸೋನ್ಸ್ (50) ಎಂದು ಗುರುತಿಸಲಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಅವರ ಪುತ್ರ ಶೆರ್ವಿನ್ (20) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಯಿ-ಮಗ ಪ್ರಯಾಣಿಸುತ್ತಿದ್ದ ಸ್ಕೂಟರ್ ನಿಟ್ಟೂರು ರಸ್ತೆಯ ಬದಿಯಲ್ಲಿರುವ ಬಬ್ಬುಸ್ವಾಮಿ ದೈವಸ್ಥಾನದ ಕಾಂಪೌಂಡ್ ಗೋಡೆಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ಹಿಂಬದಿಯಲ್ಲಿ ಕುಳಿತಿದ್ದ ಹೆಲೆನ್ ಅವರಿಗೆ ತೀವ್ರ ಗಾಯಗಳಾಗಿವೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles