Thursday, November 5, 2026

spot_img

ಹದಗೆಟ್ಟ ಅಮ್ಮಣ್ಣಿ ರಾಮಣ್ಣ ಸಭಾಭವನ–ಚಿಟ್ಪಾಡಿ ರಸ್ತೆ ತಕ್ಷಣ ಡಾಮರೀಕರಣಕ್ಕೆ ಸೂಚನೆ

ಉಡುಪಿ: ಉಡುಪಿ ನಗರಸಭೆಯ ಬೈಲೂರು ವಾರ್ಡ್ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿಯಿಂದ ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ತೀವ್ರ ಸಮಸ್ಯೆ ಉಂಟುಮಾಡಿರುವ ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿಗೆ ಸಂಪರ್ಕಿಸುವ ಮುಖ್ಯ ರಸ್ತೆಯನ್ನು ತಕ್ಷಣ ದುರಸ್ತಿಗೊಳಿಸಿ ಡಾಮರೀಕರಣ ಮಾಡುವಂತೆ ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ ನಗರಸಭೆ ನಿಧಿಯಿಂದ ಸುಮಾರು 97 ಲಕ್ಷ ರೂ. ವೆಚ್ಚದಲ್ಲಿ ಪಿಪಿಸಿ ಕಾಲೇಜು, ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಭಾಗದ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ. ಆದರೆ, ಕಾಮಗಾರಿ ವೇಳೆ ಕೆಲವು ಕಡೆ ಬಂಡೆ ಸಿಕ್ಕಿರುವುದರಿಂದ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಇದರಿಂದ ವಾಹನ ಸವಾರರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದು, ಸ್ಥಳೀಯರು ಧೂಳಿನ ಸಮಸ್ಯೆಯಿಂದಲೂ ಸಂಕಷ್ಟ ಎದುರಿಸುತ್ತಿದ್ದಾರೆ. ರಸ್ತೆ ಹದಗೆಟ್ಟಿರುವುದರಿಂದ ಸಾರ್ವಜನಿಕರ ದೈನಂದಿನ ಓಡಾಟಕ್ಕೂ ಅಡಚಣೆಯಾಗಿದೆ.

ಈ ಹಿನ್ನೆಲೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು. ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಕೂಡಲೇ ಮುಖ್ಯ ರಸ್ತೆಯ ಡಾಮರೀಕರಣ ಕಾಮಗಾರಿ ಆರಂಭಿಸಬೇಕು. ಕಾಮಗಾರಿ ನಡೆಯುವ ವೇಳೆ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಕಿರಣ್ ಕುಮಾರ್ ಬೈಲೂರು, ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಪ್ರಮುಖರಾದ ರತ್ನಾಕರ ಶೇರಿಗಾರ್, ವಸಂತ ರಾಜ್ ಚಂದನ್, ರಮೇಶ್, ರಂಜಿತ್, ನಿತಿನ್ ಪೈ, ಮನ್ಸುಖ್ ಲಾಲ್ ಪಟೇಲ್, ನಗರಸಭೆ ಇಂಜಿನಿಯರ್ ದಿವಾಕರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles