ಕುಂದಾಪುರ: ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಹರ ಗರ್ ತಿರಂಗಾ ಯಾತ್ರೆಯ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಕುಂದಾಪುರದ ವತಿಯಿಂದ ಜರುಗುವ ಬೈಕ್ ಜಾಥಾದ ಪೂರ್ವಭಾವಿ ಸಭೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ವಹಿಸಿದರು.

ಹರ್ ಘರ್ ತಿರಂಗ ಅಭಿಯಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಆಗಸ್ಟ್ 10 ಭಾನುವಾರ ದ್ವಿಚಕ್ರ ವಾಹನದೊಂದಿಗೆ ಬೃಹತ್ ಜಾಥ ನಡೆಯಲಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ. ಮಾಹಿತಿ ನೀಡಿದ ಅವರು ಈ ಬೈಕ್ ಜಾಥಾ ಶಿರೂರು ಮೂರ್ ಕೈ ಯಿಂದ ಜಾಥಾ ಆರಂಭವಾಗಿ ಸೈಬ್ರಕಟ್ಟೆ ಸರ್ಕಲ್ ನ ಮುಖಾಂತರವಾಗಿ ಬಾರ್ಕೂರು ಪೇಟೆಯಲ್ಲಿ ಸಮಾಪನಗೊಳ್ಳಲಿಕ್ಕಿದೆ ಎಂದರು.

ಈ ಬಗ್ಗೆ ಯುವ ಮೋರ್ಚಾ ಕುಂದಾಪುರ ಮಂಡಲದ ಪದಾಧಿಕಾರಿಗಳ ಸಮ್ಮುಖದಲ್ಲಿ ಬಿಜೆಪಿ ಯುವ ಮೋರ್ಚಾ ಕುಂದಾಪುರ ಮಂಡಲ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಿದರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ ಸರ್ವರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಕುಂದಾಪುರ ಮಂಡಲ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್. ಕೆ.ಎಸ್. ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ಖಾರ್ವಿ, ಸಂಪತ್ ಶೇರಿಗಾರ್ ಹಾಗೂ ಯುವ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು


