Tuesday, July 28, 2026

spot_img

ಹೆಜಮಾಡಿ ಟೋಲ್ ಸಮಸ್ಯೆ: ಸ್ಥಳೀಯರಿಗೆ ಹಳೆ ಮಾದರಿಯಲ್ಲೇ ವಿನಾಯಿತಿ ನೀಡಲು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೂಚನೆ

ಉಡುಪಿ : ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಸ್ಥಳೀಯರಿಗೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಮಂಗಳವಾರ ಹೆಜಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಟೋಲ್ ನಿರ್ವಹಣಾ ಸಂಸ್ಥೆಯ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಭೆ ನಡೆಸಿ ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ಸ್ಥಳೀಯ ನಿವಾಸಿಗಳು ಟೋಲ್ ವಿನಾಯಿತಿಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಶಾಸಕರ ಗಮನಕ್ಕೆ ತಂದರು. ಈ ವೇಳೆ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸ್ಥಳೀಯರಿಗೆ ಈ ಹಿಂದೆ ಜಾರಿಯಲ್ಲಿದ್ದ ಮಾದರಿಯಂತೆ ಟೋಲ್ ಶುಲ್ಕ ವಿನಾಯಿತಿ ಕಲ್ಪಿಸುವ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಟೋಲ್ ಅಧಿಕಾರಿಗಳಿಗೆ ಸೂಚಿಸಿದರು.

ಸ್ಥಳೀಯರ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗದಂತೆ ಸಮಸ್ಯೆಯನ್ನು ಶೀಘ್ರ ಪರಿಷ್ಕರಿಸುವಂತೆ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು. ಸಭೆಯಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇನಾಯತ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಟೋಲ್ ಅಧಿಕಾರಿಗಳು, ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles